ಸಾರಾಂಶ
ಕನ್ನಡಪ್ರಭ ವಾರ್ತೆ ಸಾಲಿಗ್ರಾಮಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಾಲಿಗ್ರಾಮ ತಾಲೂಕಿನ ನೂರಾರು ಭಕ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ. ಮಧುಚಂದ್ರ, ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸಲಾಗುತ್ತಿದ್ದು, ಯಾರೋ ಅನಾಮಿಕನ ಮಾತು ಕೇಳಿ ಧರ್ಮಸ್ಥಳದಲ್ಲಿ ಸರ್ಕಾರ ಹೆಣ ಹುಡುಕುವ ಹೆಸರಲ್ಲಿ ಕೋಟ್ಯಾಂತರ ಜನರ ಭಕ್ತಿ, ಶ್ರದ್ಧೆಗೆ ಅಪಚಾರ ಎಸಗುತ್ತಿದೆ. ಇದು ಖಂಡನೀಯ ಎಂದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿದ್ದಾರೆ. ವೀರೇಂದ್ರ ಹೆಗಡೆ ಅವರಿಗೆ ಹಾಗೂ ಧರ್ಮಸ್ಥಳಕ್ಕೆ ಕಪ್ಪು ಚುಕ್ಕೆ ತರಲು ವ್ಯವಸ್ಥಿತ ಅಪಪ್ರಚಾರ ಮಾಡಲು ಪಟ್ಟ ಭದ್ರ ಹಿತಾಸಕ್ತಿಗಳು ನಿರ್ಧರಿಸಿದಂತಿದೆ ಎಂದು ಆರೋಪಿಸಿದರು.ಮುಖಂಡರಾದ ರಾಜಣ್ಣ, ಎಸ್.ಬಿ. ಶೇಖರ್, ರಾಜಣ್ಣ, ಪ್ರೇಮ್ ಕುಮಾರ್, ಸಂಜಯ್, ಸುನಿಲ್ ಕುಮಾರ್ ಜೈನ್, ನೂರಾರು ಭಕ್ತರು ಇದ್ದರು.