ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದ ತನಿಖಾ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ಮತದಾನದ ಹಕ್ಕು ರಕ್ಷಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ಮಾಸ್ ಲೈನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಕೊಪ್ಪಳ: ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದ ತನಿಖಾ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ಮತದಾನದ ಹಕ್ಕು ರಕ್ಷಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ಮಾಸ್ ಲೈನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ದೇಶದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾದ ಎಸ್‌ಐಆರ್‌ ಕುರಿತ ತನಿಖಾ ವರದಿಗಳು ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಸ್ವಾಯತ್ತತೆಯನ್ನು ಖಾತರಿಪಡಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಎಸ್‌ಐಆರ್‌ ಮೂಲಕ ನಡೆದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತರಿಪಡಿಸಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕು. ಆಯೋಗದ ಅಧಿಕಾರಿಗಳ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಬಸವರಾಜ ನರೇಗಲ್, ದೇವಪ್ಪ ಬುನ್ನಟ್ಟಿ, ಹೊಳಿಯಮ್ಮ, ಶ್ಯಾಮಿದ್ ಸಾಬ್, ರಗಡಪ್ಪ, ಮಲ್ಲಪ್ಪ, ಹನುಮಂತ ಭಾಗವಹಿಸಿದ್ದರು.