ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹ

| Published : Jul 10 2025, 12:45 AM IST

ಸಾರಾಂಶ

ದಿನಕ್ಕೆ 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸಂಘ ಕಟ್ಟುವ ಹಕ್ಕು ಸೇರಿದಂತೆ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಇಲ್ಲದಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿರುವ ಕೇಂದ್ರ ಸರ್ಕಾರವು ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಿಬೇಕು

ಕನ್ನಡಪ್ರಭ ವಾರ್ತೆ ಮಾಲೂರು

ಕೇಂದ್ರ ಸರ್ಕಾರ ಜಾರಿ ತಂದಿರುವ 4 ಲೇಬರ್‌ ಕೋಡ್‌ ಗಳ ರದ್ದತಿಗೆ ಅಗ್ರಹಿಸಿ ಕಾರ್ಮಿಕರ ಒಕ್ಕೂಟ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಇಲ್ಲಿನ ಕಾರ್ಮಿಕ ಒಕ್ಕೂಟ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿತು.ಇಲ್ಲಿನ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕರ ಮುಖಂಡರುಗಳು, 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸಂಘ ಕಟ್ಟುವ ಹಕ್ಕು ಸೇರಿದಂತೆ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಇಲ್ಲದಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿರುವ ಕೇಂದ್ರ ಸರ್ಕಾರವು ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಿಬೇಕೆಂದು ಅಗ್ರಹಿಸಿದರು.

ಕನಿಷ್ಠ ವೇತನ ನಿಗದಿಗೆ ಆಗ್ರಹ

ಸಂಘಟಿತ,ಅಸಂಘಟಿತ,ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೂ ರಾಷ್ಟ್ರವ್ಯಾಪ್ತಿ 26 ಸಾವಿರ ಹಾಗೂ ರಾಜ್ಯ ವ್ಯಾಪ್ತಿ 35 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಬಿಜಿಎಂಲ್‌ ಚಿನ್ನದ ಗಣಿಯನ್ನು ಸರ್ಕಾರವೇ ಮತ್ತೇ ಆರಂಭಿಸುವಂತೆ ಒತ್ತಾಯಿಸಿದಿಸಿ ಕಾರ್ಮಿಕರಿಗೆ ಬಾಕಿ ಇರುವ ಸೌಲಭ್ಯಗಳನ್ನು ಬಡ್ಡಿ ಸಮೇತ ವಿತರಣೆ ಮಾಡಬೇಕೆಂದು ಒತ್ತಾಯಿಸಿದರು.ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಾನಂದ್‌ ಗುಡೂರ್ ,ಪ್ರಧಾನ ಸಂಚಾಲಕ ವೀರಭದ್ರಪ್ಪ ,ಸಹ ಸಂಚಾಲಕ ,ಆಶೋಕ್‌,ಕಟ್ಟಡ ಕಾರ್ಮಿಕರ ಸಂಘದ ಮಂಜುನಾಥ್‌ ,ರೈತ ಸಂಘದ ವೆಂಕಟಪ್ಪ ,ಅಂಗನವಾಡಿ ಸಂಗಘಟನೆಯ ಸುಜಾತ,ವಸಂತ್‌,ವರಲಕ್ಷ್ಮಿ,ಮಂಜು ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.