ಹಾಲಿನ ದರ ಹೆಚ್ಚಳ ಹಿಂಪಡೆಯಲು ಆಗ್ರಹ

| Published : Jun 28 2024, 12:56 AM IST

ಸಾರಾಂಶ

ಏಕಾಏಕಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹2.10 ಏರಿಕೆ ಮಾಡಿರುವುದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಆಕ್ರೋಶ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ. ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಲಿಲ್ಲ. ಆದರೂ ಹಾಲಿನ ದರ ಗಗನಕ್ಕೇರಿದೆ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಶಹಾಪುರ: