ಸಾರಾಂಶ
ಬಾಳೆಹೊನ್ನೂರುಹಿರೇಗದ್ದೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲು ಸ್ಥಳಾವಕಾಶ ಕೊಡಬೇಕು ಎಂದು ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕಿ ಎಂ.ವಿ.ಭವಾನಿ ಹೇಳಿದರು.
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಹಿರೇಗದ್ದೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲು ಸ್ಥಳಾವಕಾಶ ಕೊಡಬೇಕು ಎಂದು ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕಿ ಎಂ.ವಿ.ಭವಾನಿ ಹೇಳಿದರು. ಸಮೀಪದ ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ತುಪ್ಪೂರು ಗ್ರಾಮ ಶಾಖೆ ಬುಧವಾರ ಆಯೋಜಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು. ದಮನಿತರ, ಶೋಷಿತರ ಧ್ವನಿಯಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಹಿರೇಗದ್ದೆ ಗ್ರಾಮದಲ್ಲಿ ಸ್ಥಾಪನೆಗೆ ಸ್ಥಳಾವಕಾಶ ನೀಡದಿದ್ದರೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ, ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.ಕೊಪ್ಪ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನವೀನ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಕಾರ್ಯ ನಿರ್ವಹಣಾಧಿಕಾರಿಗಳು ಮಾತನಾಡಿ, ಮನವಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಿದ್ದು, ಪುತ್ಥಳಿ ನಿರ್ಮಾಣಕ್ಕೆ ಜಾಗ ಗುರುತಿಸಿ ಕೊಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.ಡಿಎಸ್‌ಎಸ್ ಗ್ರಾಮ ಸಂಚಾಲಕ ಚರಣ್, ಉಮೇಶ್, ಸುನಿಲ್, ಪ್ರಜಿತ್ ಸವಿತಾ, ಜಾನಕಿ ಮತ್ತಿತರರು ಹಾಜರಿದ್ದರು. ೧೪ಬಿಹೆಚ್‌ಆರ್ ೨:
ಬಾಳೆಹೊನ್ನೂರು ಸಮೀಪದ ಹಿರೇಗದ್ದೆ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಡಿಎಸ್‌ಎಸ್ ವತಿಯಿಂದ ಕೊಪ್ಪ ತಾಪಂ ಇಓ ನವೀನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಭವಾನಿ, ಚರಣ್, ಉಮೇಶ್, ಸುನೀಲ್, ಪ್ರಜಿತ್ ಇದ್ದರು.