ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

| Published : Mar 01 2024, 02:21 AM IST

ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಪ್ರೇಮಿಗಳು ಎಂದಿಗೂ ದೇಶದ ವಿರುದ್ಧ ನಡೆದುಕೊಳ್ಳುವುದಿಲ್ಲ. ಇಂತಹವರನ್ನು ದೇಶದಲ್ಲಿ ಇರಿಸಿಕೊಳ್ಳುವ ಬದಲು ದೇಶದಿಂದ ಗಡಿಪಾರು ಮಾಡಬೇಕು

ಕನ್ನಡಪ್ರಭ ವಾರ್ತೆ ಮೈಸೂರು

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗಂಧದಗುಡಿ ಫೌಂಡೇಶನ್ ಪದಾಧಿಕಾರಿಗಳು ಮತ್ತು ಸದಸ್ಯರು ಮೈಸೂರು ಜಿಪಂ ಮುಂಭಾಗದಲ್ಲಿ ಗುರುವಾರ ಪ್ರತಿಭಟಿಸಿದರು.

ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಪ್ರೇಮಿಗಳು ಎಂದಿಗೂ ದೇಶದ ವಿರುದ್ಧ ನಡೆದುಕೊಳ್ಳುವುದಿಲ್ಲ. ಇಂತಹವರನ್ನು ದೇಶದಲ್ಲಿ ಇರಿಸಿಕೊಳ್ಳುವ ಬದಲು ದೇಶದಿಂದ ಗಡಿಪಾರು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ನಾಸಿರ್ ಹುಸೇನ್ ಅವರು, ಬೆಂಬಲಿಗರ ತಪ್ಪನ್ನು ಸಮರ್ಥಿಸಿಕೊಂಡು ಮಾಧ್ಯಮದವರಿಗೆ ಏಕವಚನದಲ್ಲಿ ನಿಂದಿಸಿದ್ದಾರೆ. ಈ ಕೂಡಲೇ ಅವರು ಮಾಧ್ಯಮದವರ ಕ್ಷಮೆ ಕೋರಬೇಕು ಎಂದು ಅವರು ಆಗ್ರಹಿಸಿದರು.

ಗಂಧದಗುಡಿ ಫೌಂಡೇಶನ್ ರಾಜ್ಯಾಧ್ಯಕ್ಷ ಆರ್ಯನ್, ಉಪಾಧ್ಯಕ್ಷ ಮನೋಹರ್ ಗೌಡ, ಮುಖಂಡರಾದ ರತನ್ ಚಿಕ್ಕು, ಚೇತನ್ ಶೆಟ್ಟಿ, ಮಹದೇವ್, ರಾಜಣ್ಣ, ಹರೀಶ್ ಮೊದಲಾದವರು ಇದ್ದರು.