ಪ್ರಜಾಪ್ರಭುತ್ವ ದಿನಾಚರಣೆ: ಉಡುಪಿಯಿಂದ ವಿಧಾನಸೌಧಕ್ಕೆ ಬೈಕ್‌ ರ್‍ಯಾಲಿ

| Published : Sep 15 2025, 01:01 AM IST

ಪ್ರಜಾಪ್ರಭುತ್ವ ದಿನಾಚರಣೆ: ಉಡುಪಿಯಿಂದ ವಿಧಾನಸೌಧಕ್ಕೆ ಬೈಕ್‌ ರ್‍ಯಾಲಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿದ ಬೈಕ್ ರ್‍ಯಾಲಿಗೆ ಶಾಸಕ ಯಶ್‌ಪಾಲ್ ಎ. ಸುವರ್ಣ ಭಾನುವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿದ ಬೈಕ್ ರ್‍ಯಾಲಿಗೆ ಶಾಸಕ ಯಶ್‌ಪಾಲ್ ಎ. ಸುವರ್ಣ ಭಾನುವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.ಅವರು ಮಾತನಾಡಿ, ಪ್ರಜಾಪ್ರಭುತ್ವ ಆಶಯಗಳ ರಕ್ಷಣೆ - ಆದರ್ಶಗಳನ್ನು ಪಾಲನೆ ಎಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ತತ್ವಗಳು ಜಾಗೃತಿಗೊಳಿಸಿ ಅದರ ಮಹತ್ವಗಳನ್ನು ಸಾರುವ ಸಲುವಾಗಿ ಈ ಬಾರಿ ನನ್ನ ಮತ ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಉದ್ದೇಶ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವುದಾಗಿದೆ ಎಂದರು.ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಮಾತನಾಡಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವದಾದ್ಯಂತ ಸೆ. 15 ರಂದು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ ಎಂದರು.ರ್‍ಯಾಲಿ ಉಡುಪಿ, ಮಂಗಳೂರು, ಹಾಸನ ಮಾರ್ಗವಾಗಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಕಾರ್ಯ ಬೆಂಗಳೂರು ವಿಧಾನಸೌಧ ವರೆಗೆ ನಡೆಯಲಿದೆ ಎಂದರು.ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಪಂ ಉಪ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು.