ಶಾಲಾ ಕಾಲೇಜುಗಳಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

| Published : Sep 17 2024, 12:56 AM IST

ಶಾಲಾ ಕಾಲೇಜುಗಳಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಅಥಣಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಅಥಣಿ

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧನೆ ಮಾಡುವ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ವಿಶ್ವದಾದ್ಯಂತ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ ಎನ್ನುವ ವಿಚಾರವನ್ನು ಶಾಲಾ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಪ್ರಜಾಪ್ರಭುತ್ವ ದಿನಾಚರಣೆ ಸವಿನೆನಪಿನಲ್ಲಿ ಅನೇಕ ಶಾಲಾ ಶಿಕ್ಷಕರು ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು. ವಿದ್ಯಾರ್ಥಿಗಳಿಂದ ಸಂವಿಧಾನ ಪೀಠಿಕೆ ಓದುವುದು, ಮಾನವ ಸರ್ಪಳಿ ನಿರ್ಮಾಣ ಮಾಡುವ ಮೂಲಕ ನಾವೆಲ್ಲರೂ ಒಂದೇ. ಭಾರತ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಹೊಂದಿದ ದೊಡ್ಡ ರಾಷ್ಟ್ರವಾಗಿದೆ ಎಂಬುದನ್ನು ವಿಶ್ವಕ್ಕೆ ಸಾರಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.