ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ:ಎ.ಎಸ್‌. ಪೊನ್ನಣ್ಣ

| Published : Mar 24 2024, 01:30 AM IST

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ:ಎ.ಎಸ್‌. ಪೊನ್ನಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ. ಉಳಿಸುವ ಜವಾಬ್ದಾರಿ ಜನರ ಮೇಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬಿಜೆಪಿ ಒಡೆದ ಮನೆ ಆಗಿದೆ. ಒಗ್ಗಟ್ಟು ಕಳೆದುಕೊಂಡಿದೆ. ಕರ್ನಾಟಕದಲ್ಲಿ ಜನ ಸೇವೆ ಮಾಡುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಎ.ಎಸ್‌. ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೈಸೂರಿನಲ್ಲಿ 10 ವರ್ಷ ಸಂಸದರಾಗಿದ್ದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವ ಬಿಜೆಪಿ ಮಹಾರಾಜರಿಗೆ ಟಿಕೆಟ್ ಕೊಟ್ಟಿದೆ. ಹಾಗಾಗಿ ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಕರ್ನಾಟಕದಲ್ಲಿ ಸಾಬೀತು ಆಗಿದೆ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದಿರುವ ಬಗ್ಗೆ ಬಿಜೆಪಿ ಜನರಿಗೆ ಉತ್ತರ ಕೊಡಬೇಕು. ಅವರು ನಿಷ್ಟ್ರಯೋಜಕರಾ? ಭ್ರಷ್ಟಾಚಾರಿಯಾ ಅಥವಾ ಪಕ್ಷ ವಿರೋಧಿಯಾ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಬಿಜೆಪಿಯಲ್ಲಿ ದೊಡ್ಡ ಸಮುದಾಯದ ನಾಯಕರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್ ಅವರನ್ನು ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ. ಲಕ್ಷ್ಮಣ್‌ ಅವರು ಇಂಜಿನಿಯರಿಂಗ್ ಪದವೀಧರ. ಪ್ರಚಾರಕ್ಕೆ ಹೋಗದೆ ಗೆಲುವು ಸಿಗುತ್ತದೆ ಎನ್ನುವುದು ಬಿಜೆಪಿ ಮೂರ್ಖತನ. ಕರ್ನಾಟಕದಲ್ಲಿ ನರೇಂದ್ರ ಮೋದಿ ಹೆಸರು ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಇಸ್ಮಾಯಿಲ್, ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಸೂರಜ್ ಹೊಸೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ತೆನ್ನೀರ ಮೈನಾ ಪಕ್ಷದ ಪ್ರಮುಖರಾದ ಲವ ಚಿಣ್ಣಪ್ಪ ಇದ್ದರು.