ಸಾರಾಂಶ
ಯಕ್ಷಶಿಕ್ಷಣ ಟ್ರಸ್ಟ್‌ನ ಸದಸ್ಯರಾದ ನಾರಾಯಣ ಎಂ. ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಸಹಕಾರದಿಂದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಮಲ್ಪೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.೮ ರಂದು ನೆರವೇರಿತು. ತರಬೇತಿ ಕಾರ್ಯಕ್ರಮವನ್ನು ದಾನಿಗಳಾದ ಸುಜಿತ್ ಎಸ್. ಅಮೀನ್ ಉದ್ಘಾಟಿಸಿದರು.ಯಕ್ಷಶಿಕ್ಷಣ ಟ್ರಸ್ಟ್‌ನ ಸದಸ್ಯರಾದ ನಾರಾಯಣ ಎಂ. ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು. ಯಕ್ಷಗಾನ ಗುರುಗಳಾದ ಬಿ. ಕೇಶವ್ ರಾವ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.
ಇದೇ ಸಂದರ್ಭ ಸುಜಿತ್ ಎಸ್. ಅಮೀನ್‌ರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶಾಲೆಯ ಹಿರಿಯ ಶಿಕ್ಷಕಿ ಸಂಧ್ಯಾ ಸ್ವಾಗತಿಸಿದರು. ಶಿಕ್ಷಕಿ ಶಕೀಲಾ ಕಾರ್ಯಕ್ರಮವನ್ನು ನಿರೂಪಿಸಿದರು. ಯಕ್ಷಗಾನ ತರಬೇತಿಯ ಮಾರ್ಗದರ್ಶಿ ಶಿಕ್ಷಕರಾದ ವಾಣಿಶ್ರೀ ವಂದಿಸಿದರು. ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.