ಸಾರಾಂಶ
ಶಿಕ್ಷಣ ಇಲಾಖೆಯಿಂದ ಶಾಲೆ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಡೆಂಘೀ ಹರಡುವ ಬಗ್ಗೆ ನಿಯಂತ್ರಣದ ಬಗ್ಗೆ ಸೊಳ್ಳೆ ಪರದೆ ಉಪಯೋಗಿಸಿ ಮಲಗುವ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು. ಶಿಶು ಅಭಿವೃದ್ಧಿ ಇಲಾಖೆಯಿಂದ ನಡೆಯುವ ತಾಯಂದಿರ ಸಭೆಗಳಲ್ಲಿ ಮಾರಕ ಡೆಂಘೀ ಬಗ್ಗೆ ಮಾಹಿತಿ ನೀಡಿ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮಾರಕ ಡೆಂಘೀ ಹಾಗೂ ಚಿಕೂನ್ ಗುನ್ಯಾ ನಿಯಂತ್ರಣ ಸಂಬಂಧ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ನಿಸರ್ಗ ಪ್ರಿಯ ಅಧ್ಯಕ್ಷತೆಯಲ್ಲಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು.ಸಭೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಜಿತ್ ಮಾತನಾಡಿ, ತಾಲೂಕಿನಲ್ಲಿ ಜನವರಿಯಿಂದ ಜೂನ್ ವರೆಗೆ 9 ಡೆಂಘೀ ಪ್ರಕರಣಗಳು ವರದಿಯಾಗಿವೆ. ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಡೆಂಘೀ ಹರಡುವ ಬಗ್ಗೆ ಮತ್ತು ರೋಗ ನಿಯಂತ್ರಣ, ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದ್ದಾರೆ ಎಂದರು.ತಹಸೀಲ್ದಾರ್ ನಿಸರ್ಗ ಪ್ರಿಯ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಶಾಲೆ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಡೆಂಘೀ ಹರಡುವ ಬಗ್ಗೆ ನಿಯಂತ್ರಣದ ಬಗ್ಗೆ ಸೊಳ್ಳೆ ಪರದೆ ಉಪಯೋಗಿಸಿ ಮಲಗುವ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು. ಶಿಶು ಅಭಿವೃದ್ಧಿ ಇಲಾಖೆಯಿಂದ ನಡೆಯುವ ತಾಯಂದಿರ ಸಭೆಗಳಲ್ಲಿ ಮಾರಕ ಡೆಂಘೀ ಬಗ್ಗೆ ಮಾಹಿತಿ ತಿಳಿಸಲು ಸಲಹೆ ನೀಡಿದರು.
ಪುರಸಭೆ, ಗ್ರಾಪಂ ವತಿಯಿಂದ ಮೈಕ್ ಮೂಲಕ ಪ್ರಚಾರ ಮಾಡಿ ಡೆಂಘೀ ನಿಯಂತ್ರಣದ ಬಗ್ಗೆ ಕರಪತ್ರವನ್ನು ಮನೆ ಮನೆಗೆ ಹಂಚಬೇಕು. ಚರಂಡಿಗಳನ್ನು ಸ್ವಚ್ಛಗೊಳಿಸಲು ಮತ್ತು ಪ್ರತಿನಿತ್ಯ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡಲು ಸೂಚಿಸಿದರು.ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮ್, ಪುರಸಭೆ ಮುಖ್ಯಾಧಿಕಾರಿ ರಾಜು ಕೆ.ವಠಾರ, ಸಿಡಿಪಿಓ ಇಲಾಖೆ ಮೇಲ್ವಿಚಾರಕಿ ರೂಪ, ಇಸಿಓ ನೀಲಾಮಣಿ, ತಾಪಂ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು, ಆರೋಗ್ಯ ಇಲಾಖೆ ಎಸ್.ಎಲ್.ಸತೀಶ್. ಪುರಸಭೆಯ ಅಶೋಕ್ ಭಾಗವಹಿಸಿದ್ದರು.