ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ : 17 ಸಾವಿರ ಗಡಿ ದಾಟಿದ ಕೇಸ್ - ಮಾಹಿತಿಗೆ ಉಚಿತ ಸಹಾಯವಾಣಿ

| Published : Jul 29 2024, 12:48 AM IST / Updated: Jul 29 2024, 05:19 AM IST

ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ : 17 ಸಾವಿರ ಗಡಿ ದಾಟಿದ ಕೇಸ್ - ಮಾಹಿತಿಗೆ ಉಚಿತ ಸಹಾಯವಾಣಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ.

 ಬೆಂಗಳೂರು :  ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ.ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. 

ಈ ಪೈಕಿ 320 ಮಂದಿಗೆ ಡೆಂಘೀ ಖಚಿತಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ.ಭಾನುವಾರದ ಪ್ರಕರಣ ಸೇರಿ 3,004 ಮಂದಿ ಸಕ್ರಿಯ ಡೆಂಘೀ ರೋಗಿಗಳು ಚಿಕಿತ್ಸೆಯಲ್ಲಿದ್ದಾರೆ. ಈ ಪೈ 2,539 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ. 465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಂಗಳೂರು ನಗರದಲ್ಲಿ 142, ಬೆಳಗಾವಿ 21, ಹಾವೇರಿ, ದಾವಣಗೆರೆ ತಲಾ 17, ರಾಮನಗರ 15, ಕಲಬುರಗಿ 13, ತುಮಕೂರು 9, ದಕ್ಷಿಣ ಕನ್ನಡ 7, ಮಂಡ್ಯ 6, ಚಿಕ್ಕಬಳ್ಳಾಪುರ 5, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ತಲಾ 4, ಚಾಮರಾಜನಗರ, ಬಾಗಲಕೋಟೆ, ವಿಜಯಪುರ ತಲಾ 3, ಧಾರವಾಡ, ಯಾದಗಿರಿ, ಬೀದರ್‌, ರಾಯಚೂರು ತಲಾ 2 ಕೊಡಗು, ಚಿಕ್ಕಮಗಳೂರು, ಕೊಪ್ಪಳ, ಉತ್ತರ ಕನ್ನಡ, ಗದಗ, ಕೋಲಾರ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದೃಢಪಟ್ಟಿದೆ.

ಡೆಂಘೀ ಕುರಿತ ಮಾಹಿತಿಗೆ ಉಚಿತ ಸಹಾಯವಾಣಿ: 1800 4258330 ಸಂಪರ್ಕಿಸಬಹುದು