ಡೆಂಘೀ ಜಾಗೃತಿ ಜಾಥಾ

| Published : Jul 14 2024, 01:33 AM IST

ಸಾರಾಂಶ

ಬೆಟಗೇರಿ ಗ್ರಾಮದ ಪ್ರಮುಖ ಬೀದಿಯಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಹಮ್ಮಿಕೊಂಡಿರುವ ಡೆಂಘೀ ಮತ್ತು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಜಾಗೃತಿ ಜಾಥಾ ನಡೆಸಲಾಯಿತು.

ಗೋಕಾಕ: ಬೆಟಗೇರಿ ಗ್ರಾಮದ ಪ್ರಮುಖ ಬೀದಿಯಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಹಮ್ಮಿಕೊಂಡಿರುವ ಡೆಂಘೀ ಮತ್ತು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಢಿಸಲಾಯಿತು. ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ, ಪ್ರಧಾನಗುರುಗಳಾದ ವೈ.ಸಿ.ಶೀಗಿಹಳ್ಳಿ, ಬಸವರಾಜ ಪಣದಿ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಉಭಯ ಶಾಲೆಯ ಶಿಕ್ಷಕರು, ಸ್ಥಳೀಯ ಆಶಾ-ಅಂಗವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಉಭಯ ಶಾಲೆಗಳ ಶಾಲಾ ವಿದ್ಯಾರ್ಥಿಗಳು, ಮತ್ತಿತರರು ಇದ್ದರು.