ಡೆಂಘೀಜ್ವರ ನಿಯಂತ್ರಣ ಅರಿವು ಅಗತ್ಯ

| Published : May 18 2024, 12:32 AM IST

ಸಾರಾಂಶ

ಡೆಂಘೀ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಡೆಂಘೀ ನಿಯಂತ್ರಣ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಡಾ.ಷಣ್ಮುಖಪ್ಪ - - - ದಾವಣಗೆರೆ: ಡೆಂಘೀ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಘೀ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ನಿಂತ ನೀರು ಸೊಳ್ಳೆಗಳ ತವರು. ಡೆಂಘೀಜ್ವರ ಈಡಿಸ್ ಎಂಬ ಸೊಳ್ಳೆಯಿಂದ ಹರಡುತ್ತದೆ. ನೀರಿನ ಸಂಗ್ರಹದ ಪರಿಕರಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಛಗೊಳಿಸಿ, ಮನೆ, ಕಟ್ಟಡಗಳ ಸುತ್ತಮುತ್ತ, ಖಾಲಿ ಜಾಗ- ನಿವೇಶನಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ಪರಿಕರಗಳಲ್ಲಿನ ಬಾಲಹುಳುಗಳೇ ಸೊಳ್ಳೆ. ಇವುಗಳ ಉತ್ಪತ್ತಿಯನ್ನು ನಿಯಂತ್ರಣದಲ್ಲಿಟ್ಟು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ, ಡೆಂಘೀ ಮಹಾಮಾರಿಯನ್ನು ಸೋಲಿಸಿ ಎಂದು ಮನವಿ ಮಾಡಿದರು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕೆ.ಎಚ್. ಗಂಗಾಧರ್, ದಾವಣಗೆರೆ ತಾಲೂಕು ಆರೋಗ್ಯ ಅಧಿಕಾರಿ ಡಾ.ದೇವರಾಜ್ ಪಟಾಗೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕ ಡಾ.ಮಧು, ಡಾ. ಸುರೇಶ್ ಬಾರ್ಕಿ ಡಿಎಚ್‌ಒ, ಡಾ. ರೇಣುಕಾ ಆರಾಧ್ಯ ಆರ್‌ಸಿಎಚ್, ಡಿಎಸ್‌ಒ ಡಾ.ರಾಘವನ್, ಎಫ್‌ಡಬ್ಲ್ಯೂಒ ಡಾ.ರುದ್ರಸ್ವಾಮಿ, ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಿಬ್ಬಂದಿ ಮತ್ತು ಅಂಗನವಾಡಿ ಆಶಾ ಕಾರ್ಯಕರ್ತೆಯರು, ಇತರರು ಭಾಗವಹಿಸಿದ್ದರು.

- - - -17ಕೆಡಿವಿಜಿ34ಃ:

ದಾವಣಗೆರೆ ಜಿಲ್ಲಾಡಳಿತದಿಂದ ನಡೆದ ರಾಷ್ಟ್ರೀಯ ಡೆಂಘೀ ಕಾಯಿಲೆ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಡಿಎಚ್‌ಒ ಡಾ.ಷಣ್ಮುಖಪ್ಪ ಚಾಲನೆ ನೀಡಿದರು.