ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

| Published : Oct 24 2024, 12:38 AM IST

ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ರಾಯಚೂರು ಜಿಲ್ಲಾ ಘಟಕ ಆರೋಪಿಸಿದೆ.

ಕನ್ನಡಪ್ರಭ ವಾರ್ತೆ ರಾಯಚೂರು

ವಿಜಯಪುರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಲಾಯಿತು.ವಕ್ಫ್ ಬೋರ್ಡ್ ಆಸ್ತಿಯ ವಿಚಾರವಾಗಿ ಮಾಡತನಾಡುವಾಗ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.ಸರ್ವ ಜನಾಂಗದ ಶಾಂತಿಯ ತೋಟ ಎಂಬ ರಾಜ್ಯದಲ್ಲಿ ವಿಶೇಷವಾಗಿ ಎಲ್ಲರಿಗೂ ಸಮಾನವಾಗಿ ಗೌರವದಿಂದ ನೋಡುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿ, ಈಗ ಒಂದು ಸಮುದಾಯದಾಯದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಹಾಗೂ ಸಂವಿಧಾನಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದರು.ಕೂಡಲೇ ಬಸವನಗೌಡ ಪಾಟೀಲ ಯತ್ನಾಳ್‌ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು ಹಾಗೂ ಸಂವಿಧಾನ ವಿರೋಧಿ ಯತ್ನಾಳರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದರು.ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಾಜೀದ್ ಹುಸೇನ್, ರಾಜ್ಯ ಕಾರ್ಯದರ್ಶಿ ತಿಮ್ಮಪ್ಪಸ್ವಾಮಿ, ಉಪಾಧ್ಯಕ್ಷ ವಿ.ಎಸ್. ಯಲ್ಲಪ್ಪ, ಸಿದ್ದಪ್ಪ ಮನ್ಸಲಾಪೂರು, ತಾಜುದ್ದೀನ್ ಖಾನ್, ಯಲ್ಲಪ್ಪ ಭಂಡಾರಿ ಉಪಸ್ಥಿತರಿದ್ದರು.