ಇಂದಿನ ಶೈಕ್ಷಣಿಕ ಸನ್ನಿವೇಶದಲ್ಲಿ ಸಂಶೋಧನಾ ವಿಶ್ಲೇಷಣೆ ಅನಿವಾರ್ಯ

| Published : Jan 22 2025, 12:34 AM IST

ಇಂದಿನ ಶೈಕ್ಷಣಿಕ ಸನ್ನಿವೇಶದಲ್ಲಿ ಸಂಶೋಧನಾ ವಿಶ್ಲೇಷಣೆ ಅನಿವಾರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿ ಕೇಂದ್ರಿತ, ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆಯ ಅಗತ್ಯವಾಗಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಇಂದಿನ ಶೈಕ್ಷಣಿಕ ಸನ್ನಿವೇಶದಲ್ಲಿ ಸಂಶೋಧನಾ ವಿಶ್ಲೇಷಣೆಗಳು ಮತ್ತು ಸಂಖ್ಯಾಶಾಸ್ತ್ರದ ಉಪಕರಣಗಳು ಅನಿವಾರ್ಯವಾಗಿವೆ ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ತಿಳಿಸಿದರು.

ಮಾನಸ ಗಂಗೋತ್ರಿಯ ವಿವಿ ಆಹಾರ ವಿಜ್ಞಾನ ಮತ್ತು ಪೋಷಣೆ ಅಧ್ಯಯನ ವಿಭಾಗವು ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಸೆಮಿನಾರ್ ಹಾಲ್‌ ನಲ್ಲಿ ಆಯೋಜಿಸಿರುವ ಎಸ್ ಪಿಎಸ್ಎಸ್ ಬಳಸಿ ಅನ್ವಯಿಕ ಜೈವಿಕ ಅಂಕಿ ಅಂಶಗಳು ಮತ್ತು ಸಂಶೋಧನಾ ವಿಶ್ಲೇಷಣೆ ಕುರಿತು ಎರಡು ದಿನಗಳ ಅಧ್ಯಾಪಕರ ಅಭಿವೃದ್ಧಿ ವಿಚಾರಸಂಕಿರಣವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಅವು ಗುಣಮಟ್ಟದ ಸಂಶೋಧನೆ ಮತ್ತು ನಾವೀನ್ಯತೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತವೆ. ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ಅನ್ವಯದ ನಡುವಿನ ಅಂತರವನ್ನು ಕಡಿಮೆ ಮಾಡುತ್ತವೆ. ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿ ಕೇಂದ್ರಿತ, ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆಯ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ನಿರ್ದೇಶಕಿ ಪ್ರೊ.ಎಸ್.ಎಸ್. ಮಾಲಿನಿ, ಆಹಾರ ವಿಜ್ಞಾನ ಮತ್ತು ಪೋಷಣೆ ಅಧ್ಯಯನ ವಿಭಾಗದ ಅಧ್ಯಕ್ಷೆ ಪ್ರೊ.ಎಂ. ಕೋಮಲಾ ಇದ್ದರು.