ದೊಡ್ಡಬಳ್ಳಾಪುರ: ಬೆಂ.ಗ್ರಾ ಜಿಲ್ಲೆಯಲ್ಲಿ ಮಾದಕ ವಸ್ತುಗಳ(ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅಧಿಕಾರಿಗಳಿಗೆ ಸೂಚಿಸಿದರು
ದೊಡ್ಡಬಳ್ಳಾಪುರ: ಬೆಂ.ಗ್ರಾ ಜಿಲ್ಲೆಯಲ್ಲಿ ಮಾದಕ ವಸ್ತುಗಳ(ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಾದಕವಸ್ತು ಸಮನ್ವಯ ಪೋರ್ಟಲ್ ಸಮಿತಿ ಸಭೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ನಿರ್ಮೂಲನೆ ಮಾಡಲು ವಿವಿಧೆಡೆ ಮೆಡಿಕಲ್ ಕಾಲೇಜು, ನರ್ಸಿಂಗ್, ಫಾರ್ಮಸಿ ಮುಂತಾದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹೊರರಾಜ್ಯದ ವಿದ್ಯಾರ್ಥಿಗಳು ಉಳಿದುಕೊಳ್ಳುವ ಪಿಜಿ ಹಾಗೂ ಖಾಸಗಿ ಹಾಸ್ಟೆಲ್‌ಗಳ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕೃಷಿ, ತೋಟಗಾರಿಕೆ, ರೇಷ್ಮೆ ಪ್ರದೇಶಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ, ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಬ್ಯಾಗ್ ಪರಿಶೀಲನೆ, ಮಕ್ಕಳ ನಡವಳಿಕೆಯಲ್ಲಿ ಸಹ ನಿಗಾ ವಹಿಸಬೇಕು. ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಎಸ್ಪಿ ಚಂದ್ರಕಾಂತ್ ಮಾತನಾಡಿ, ಮಾದಕ ವಸ್ತುಗಳ ಜಾಲ ಕೇವಲ ಶಾಲಾ-ಕಾಲೇಜುಗಳಿಗೆ ಸೀಮಿತವಾಗಿಲ್ಲ, ಕೈಗಾರಿಕಾ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಖಾಲಿ ನಿವೇಶನ, ಕೃಷಿ ಭೂಮಿ, ಮನೆಯ ತಾರಸಿಯಲ್ಲಿ ಸಹ ಬೆಳೆಯುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಡಿವೈಎಸ್ಪಿ ಪಾಂಡುರಂಗ, ಅಧಿಕಾರಿಗಳು ಉಪಸ್ಥಿತರಿದ್ದರು.
25ಕೆಡಿಬಿಪಿ1-ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎನ್ಕೋರ್ಡ್ ಸಮಿತಿ ಸಭೆ ನಡೆಯಿತು.