ಸುಲೇಪೇಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಸಿಬ್ಬಂದಿ ಹಾಜರಾತಿ ವೈದ್ಯರ ಕರ್ತವ್ಯ ಬಗ್ಗೆ ಖುದ್ದಾಗಿ ಪರಿಶೀಲಿಸಿದರು.

-ಸುಲೇಪೇಟ್‌ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ್ ಭೇಟಿ

-ಆಸ್ಪತ್ರೆಯ ವ್ಯವಸ್ಥೆ, ಸಿಬ್ಬಂದಿ ಹಾಜರಾತಿ ಖುದ್ದಾಗಿ ಪರಿಶೀಲಿಸಿದ ಸಚಿವರು

--

ಕನ್ನಡಪ್ರಭ ವಾರ್ತೆ ಚಿಂಚೋಳಿ

ಸುಲೇಪೇಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಸಿಬ್ಬಂದಿ ಹಾಜರಾತಿ ವೈದ್ಯರ ಕರ್ತವ್ಯ ಬಗ್ಗೆ ಖುದ್ದಾಗಿ ಪರಿಶೀಲಿಸಿದರು.

ಸುಲೇಪೇಟ್ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆಗಳು ಖಾಲಿ ಇವೆ.

ಕೂಡಲೇ ವೈದ್ಯರನ್ನು ನಿಯೋಜನೆ ಮಾಡಿ ಬಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಇಲಾಖೆ ಅಧಿಕಾರಿ ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದರು.

ಸುಲೇಪೇಟ್ ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ಹಾಜರಾತಿ ಪುಸ್ತಕದಲ್ಲಿನ ವೈದ್ಯರ, ಸಿಬ್ಬಂದಿ ಹಾಜರಾತಿ ಮಾಹಿತಿ ಪರಿಶೀಲನೆ ನಡೆಸಿದ್ದರು. ಗ್ರಾಮೀಣ ಭಾಗದ ರೋಗಿಗಳಿಗೆ ಆರೋಗ್ಯ ಕಾಪಾಡುವ ಕುರಿತು ಆಡಳಿತ ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆ ಸಿಬ್ಬಂದಿ ಹಾಜರಾತಿ ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದ ಸಚಿವರು ವೈದ್ಯರು ಮತ್ತು ಸಿಬ್ಬಂದಿ ಕರ್ತವ ನಿರ್ಲಕ್ಷ ಮಾಡಬಾರದು.

ರೋಗಿಗಳ ಸಾರ್ವಜನಿಕ ಹಿತ ಕಾಪಾಡದೆ ಇರುವ ವೈದ್ಯರನ್ನು ಗುರುತಿಸಿ ವಜಾ ಮಾಡಲಾಗುತ್ತದೆ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉತ್ತಮ ವಾತಾವರಣ ಸೇರಿದಂತೆ ಹಾಸಿಗೆ, ಶೌಚಾಲಯ ಕುಡಿವ ನೀರು ವಿದ್ಯುತ್ ದೀಪ ಹಾಗೂ ಇನ್ನಿತರ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದು ಆಸ್ಪತ್ರೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಗಮನಕ್ಕೆ ತರಬೇಕೆಂದು ಹೇಳಿದರು. ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರ್ ಯಾರು ಇರಲಿಲ್ಲ ಕೇವಲ ಸಿಬ್ಬಂದಿ ಇದ್ದರು.

ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಹುದ್ದೆ ಖಾಲಿ ಇದ್ದು, ಜನರು ತುರ್ತು ಚಿಕಿತ್ಸೆಗಾಗಿ ಚಿಂಚೋಳಿ ಮತ್ತು ಕಲಬುರಗಿ, ಸೇಡಂ ಗೆ ಹೋಗುವ ಪರಿಸ್ಥಿತಿ ಇದೆ ಎಂದು ಕಾಂಗ್ರೆಸ್ ಮುಖಂಡರಾದ ತಾಪಂ ಮಾಜಿ ಸದಸ್ಯ ತಾಹೇರ ಪಟೇಲ್ ಸಚಿವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

ಫೋಟೊ

ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಮತ್ತು ಹಾಜರಾತಿ ಪರಿಶೀಲಿಸಿದರು.