ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಟ್ಟಣದಕ್ಕೆ ಆಗಮಿಸಿದಾಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.ಪಟ್ಟಣದ ದಂಡಿನ ಮಾರಮ್ಮನ ದೇವಸ್ಥಾನದಿಂದ ಸಾವಿರಾರು ಮಂದಿ ಬೈಕ್ ರ‍್ಯಾಲಿ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆ ಡಿಕೆ ಎಂದು ಜೈಕಾರ ಹಾಕಿದರು.
ಈ ವೇಳೆ ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ವಡ್ಡರಹಳ್ಳಿ ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್ ಮುಖಂಡರಾದ ಸಿ.ಮಾಧು, ಪುಟ್ಟಸ್ವಾಮಿ, ಮುಟ್ಟನಹಳ್ಳಿ ಅಂಬರೀಶ್, ರೋಹಿತ್ ಗೌಡ, ಮಹೇಶ್, ಎಂ.ಎಲ್.ಚೌಡಪ್ಪ, ಸಾಹಳ್ಳಿ ಶಶಿ, ದಿಲೀಪ್ ಕುಮಾರ್, ಜಲ್ಲಿ ಚನ್ನಪ್ಪ, ಸಿದ್ದರಾಜು ಇದ್ದರು.ಇದೇ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಚೊಟ್ಟನಹಳ್ಳಿ ಗ್ರಾಪಂ ಸದಸ್ಯ ಸಿ.ಎಸ್.ಸಿದ್ದರಾಜು (ಸಿಮೆಂಟ್ ಸಿದ್ದು) ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು.
ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಶಾಖೆಯ 66/11 ಕೆವಿ ವಿದ್ಯುತ್ ಉಪ ವಿತರಣ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಮಾ.11ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಲಾಖೆ ಎಇಇ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಬೆಳಗೊಳ ವಿದ್ಯುತ್ ವಿತರಣ ಕೇಂದ್ರದ ಬೆಳಗೊಳ, ಕೆ.ಆರ್ ಸಾಗರ, ಹೊಸ ಆನಂದೂರು, ಮೊಗರಹಳ್ಳಿ, ಕಾರೇಕುರ, ಕುಪ್ಪೆದಡ, ಕೆಇಡಿಬಿ ಇಂಡಸ್ಟ್ರಿಯಲ್, ಹೊಂಗಹಳ್ಳಿ ವಾಟರ್ ಸಪ್ಲೈ, ಆನಗಹಳ್ಳಿ, ಹೊಸ ಉಂಡವಾಡಿ, ಮಜ್ಜಿಗೆಪುರ, ಎಂಎಂಜಿ ಲೇಔಟ್, ಹುಲಿಕೆರೆ, ಹೊಸಹಳ್ಳಿ, ಪಾಲಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲಾ ಗ್ರಾಮಗಳು ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))