ಉಪ ಮುಖ್ಯಮಂತ್ರಿಗಳಿಂದ ಹಾಸನಾಂಬ ದರ್ಶನ

| Published : Oct 15 2025, 02:06 AM IST

ಸಾರಾಂಶ

ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ‌ ವ್ಯವಸ್ಥೆ ಮಾಡಿದ್ದಾರೆ. ಪ್ರತಿವರ್ಷ ದೇವಿ ದರ್ಶನ‌ ಮಾಡುತ್ತಿದ್ದೇನೆ.‌ ದೇವರು ಹಾಗೂ ಭಕ್ತರಿಗೂ ವ್ಯವಹಾರ ನಡೆಯುವ ಜಾಗವೇ ದೇವಸ್ಥಾನ. ನಾನು ಕೂಡ ಎಲ್ಲರಿಗೂ ಒಳ್ಳೆಯದಾಗಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು. ಸಿಎಂ ಸ್ಥಾನದ ವಿಚಾರವಾಗಿ ನಾನುಂಟು ದೇವರುಂಟು ಎಂದಷ್ಟೆ ಹೇಳಿದರು.

ಹಾಸನ: ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ‌ ವ್ಯವಸ್ಥೆ ಮಾಡಿದ್ದಾರೆ. ಪ್ರತಿವರ್ಷ ದೇವಿ ದರ್ಶನ‌ ಮಾಡುತ್ತಿದ್ದೇನೆ.‌ ದೇವರು ಹಾಗೂ ಭಕ್ತರಿಗೂ ವ್ಯವಹಾರ ನಡೆಯುವ ಜಾಗವೇ ದೇವಸ್ಥಾನ. ನಾನು ಕೂಡ ಎಲ್ಲರಿಗೂ ಒಳ್ಳೆಯದಾಗಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.

ಸಿಎಂ ಸ್ಥಾನದ ವಿಚಾರವಾಗಿ ನಾನುಂಟು ದೇವರುಂಟು ಎಂದಷ್ಟೆ ಹೇಳಿದರು.ಈ ಸಂದರ್ಭದಲ್ಲಿ ಸಂಸದರಾದ ಶ್ರೇಯಸ್ ಎಂ ಪಟೇಲ್, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಮತ್ತಿತರರು ಹಾಜರಿದ್ದರು.