ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಗುರುವಾರ ಸಮುದಾಯ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಬ್ರಿ: ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಗುರುವಾರ ಸಮುದಾಯ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಾಗೂ ಸ್ಥಳೀಯವಾಗಿ ಎದುರಾಗುತ್ತಿರುವ ಅಡಚಣೆಗಳ ಕುರಿತು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ಉಪಸ್ಥಿತರಿದ್ದ ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ, ಹೆಬ್ರಿಯ ವಿಶ್ವಕರ್ಮ ಸಮಾಜಕ್ಕೆ ಸಮುದಾಯ ಭವನದ ತುರ್ತು ಅವಶ್ಯಕತೆ ಇದೆ. ಸಮಾಜದ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳನ್ನು ನಡೆಸಲು ಅನುಕೂಲವಾಗುವ ಈ ಭವನದ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಹೆಬ್ರಿ ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ, ಕಂದಾಯ ಹಾಗೂ ಭೂ ಮಾಪನ ಇಲಾಖೆ ಅಧಿಕಾರಿಗಳು, ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಮುದ್ರಾಡಿ ಕೇಶವ ಆಚಾರ್ಯ ಸೇರಿದಂತೆ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.