ಹುಣಸೆಹಣ್ಣು ಸಂಸ್ಕರಣ ಘಟಕಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

| Published : Oct 13 2025, 02:02 AM IST

ಹುಣಸೆಹಣ್ಣು ಸಂಸ್ಕರಣ ಘಟಕಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ನಬಾರ್ಡ್ ಸಹಯೋಗದಲ್ಲಿ ₹೪.೫ ಕೋಟಿ ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದ್ದು, ಘಟಕದ ಕಾಮಗಾರಿ ಪೂರ್ಣಗೊಂಡಿದೆ.

ಕೂಡ್ಲಿಗಿ: ತಾಲೂಕಿನ ಗುಡೇಕೋಟೆ ಸಮೀಪದ ಕಸಾಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ರಾಜ್ಯದ ಮೊದಲ ಹುಣಸೆಹಣ್ಣು ಮತ್ತು ಶೇಂಗಾ ಸಂಸ್ಕರಣ ಘಟಕಕ್ಕೆ ಭಾನುವಾರ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೆರೆ ಭೇಟಿ ನೀಡಿ ಪರಿಶೀಲಿಸಿದರು.ಕೂಡ್ಲಿಗಿ ತಾಲೂಕು ರಾಜ್ಯದಲ್ಲಿ ಅತೀ ಹೆಚ್ಚು ಹುಣಸೆಹಣ್ಣು ಉತ್ಪಾದನೆ ಮಾಡುತ್ತಿರುವ ಕಾರಣ ಸರ್ಕಾರ ಮತ್ತು ನಬಾರ್ಡ್ ಸಹಯೋಗದಲ್ಲಿ ₹೪.೫ ಕೋಟಿ ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದ್ದು, ಘಟಕದ ಕಾಮಗಾರಿ ಪೂರ್ಣಗೊಂಡಿದೆ. ಇದೇ ಅ.೧೭ರಂದು ಘಟಕವು ಉದ್ಘಾಟನೆಗೊಳ್ಳಲ್ಲಿದೆ. ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಸಂಸ್ಕರಣ ಘಟಕದ ಮುಂದಿರುವ ಖಾಲಿ ಜಾಗದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲ್ಲಿದ್ದು, ಆ ಜಾಗವನ್ನು ಪರಿಶೀಲಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿವ ಜನರ ಹಾಗೂ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.ಶನಿವಾರ ಸಂಜೆ ವಿಜಯನಗರ ಎಸ್ಪಿ ಎಸ್.ಜಾಹ್ನವಿ ಸಹ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಕೂಡ್ಲಿಗಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ, ನಬಾರ್ಡ್ ಡಿ.ಡಿ. ವಿಜಯಕುಮಾರ್, ಕಂದಾಯ ನಿರೀಕ್ಷಕ ಮರುಳಿಕೃಷ್ಣ, ಮಾರಪ್ಪ ಹಾಗೂ ಗುಡೇಕೋಟೆ ಪಿಎಸೈ ಸುಬ್ರಹ್ಮಣ್ಯ ಸೇರಿದಂತೆ ಹಲವು ಮುಖಂಡರು ಇದ್ದರು.