ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ

| Published : Jan 14 2025, 01:00 AM IST

ಸಾರಾಂಶ

ಕಾರ್ಮಿಕ ನಿರೀಕ್ಷಕ ಕಿರಣ್ ಇಲಾಖೆಯ ಕಚೇರಿಯಲ್ಲಿ ಕೆಲಸವನ್ನು ಮಾಡುತ್ತಿದ್ದಾರೆಯೇ ಅಥವಾ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆಯೇ, ಕಚೇರಿಗೆ ಗೈರಾಗಿ ಹಾಜರಾತಿ ಪುಸ್ತಕವನ್ನು ಬೀರುವಿನಲ್ಲಿಟ್ಟು ಬೀಗ ಹಾಕಿಕೊಂಡು ಹೋದರೆ ಯಾರನ್ನು ಪ್ರಶ್ನಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರಿಗೆ ದೂರವಾಣಿ ಮುಖಾಂತರ ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು

ಕನ್ನಡಪ್ರಭ ವಾರ್ತೆ ಕೆಜಿಎಫ್ ಉಪ ಲೋಕಾಯುಕ್ತ ನ್ಯಾ. ಡಿ.ವೀರಪ್ಪ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿತು. ಕಾರ್ಮಿಕ ಅಧಿಕಾರಿಗೆ ತರಾಟೆ

ಕಾರ್ಮಿಕ ನಿರೀಕ್ಷಕ ಕಿರಣ್ ಇಲಾಖೆಯ ಕೆಲಸವನ್ನು ಮಾಡುತ್ತಿದ್ದಾರೆಯೇ ಅಥವಾ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆಯೇ, ಕಚೇರಿಗೆ ಗೈರಾಗಿ ಹಾಜರಾತಿ ಪುಸ್ತಕವನ್ನು ಬೀರುವಿನಲ್ಲಿಟ್ಟು ಬೀಗ ಹಾಕಿಕೊಂಡು ಹೋದರೆ ಯಾರನ್ನು ಪ್ರಶ್ನಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರಿಗೆ ದೂರವಾಣಿ ಮುಖಾಂತರ ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು.

ಕಾರ್ಮಿಕ ನಿರೀಕ್ಷಕ ಕಿರಣ್ ಕಚೇರಿಯಲ್ಲಿ ಲಭ್ಯವಾಗುವುದೇ ಇಲ್ಲ, ಕೆಲವು ಏಜೆಂಟರನ್ನಿಟ್ಟುಕೊಂಡು ಸವಲತ್ತುಗಳನ್ನು ಅನರ್ಹರಿಗೆ ನೀಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರೊಬ್ಬರನ್ನು ಹೊರತುಪಡಿಸಿ ಕಚೇರಿಯಲ್ಲಿ ಬೇರೆ ಯಾವುದೇ ಸಿಬ್ಬಂದಿ ಇರಲಿಲ್ಲ. ಇದರಿಂದ ಕೋಪಗೊಂಡ ಉಪ ಲೋಕಾಯುಕ್ತರು, ಕೂಡಲೇ ಕಾರ್ಮಿಕ ನಿರೀಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

೩೦ ಮಂದಿ ಅಧಿಕಾರಿಗಳ ತಂಡ೩೦ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ತಾಲೂಕು ಆಡಳಿತ ಸೌಧದಲ್ಲಿನ ಕಂದಾಯ ಇಲಾಖೆ, ಉಪ ನೊಂದಣಾಧಿಕಾರಿಗಳ ಕಚೇರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 15 ವರ್ಷದಿಂದ ಒಂದೇ ಕಡೆ ಕೆಲಸ

ಆರ್‌ಆರ್‌ಟಿ ಕಚೇರಿಯಲ್ಲಿ ಚಂದ್ರು ಎಂಬುವವರು ೧೫ ವರ್ಷಗಳಿಂದ ಒಂದೇ ಕಡೆ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದರು. ೧೫ ವರ್ಷಗಳಿಂದ ನೌಕರರೊಬ್ಬರನ್ನು ಒಂದೇ ಸ್ಥಳದಲ್ಲಿ ಮುಂದುವರೆಸಲು ಕಾರಣವೇನು ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿದುಕೊಳ್ಳುವಂತೆ ಸಿಬ್ಬಂದಿಗೆ ಸೂಚಿಸಿದರು.