ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ
KannadaprabhaNewsNetwork | Published : Oct 06 2023, 01:17 AM IST / Updated: Oct 06 2023, 10:40 AM IST
ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ
ಸಾರಾಂಶ
ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ.
ಕನ್ನಡಪ್ರಭ ವಾರ್ತೆ ಕುಂದಗೋಳ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ. ಗ್ರಾಮದ ಬಸನಗೌಡ ಮಂಜುನಾಥಗೌಡ ನೇಗಳೂರ ಎಂಬ ಯುವಕ ತನ್ನ ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ಅಂಬೇಡ್ಕರ್ ಸಂದೇಶಕ್ಕೆ ಅವಹೇಳನಕಾರಿಯಾಗಿ ಸಂದೇಶ ಪೋಸ್ಟ್ ಮಾಡಿದ್ದ. ವಿಷಯ ತಿಳಿದು ಗ್ರಾಮಕ್ಕೆ ಕುಂದಗೋಳ ಸಿಪಿಐ ಶಿವಾನಂದ ಅಂಬಿಗೇರ್ ತೆರಳಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಯುವಕನ ವಿರುದ್ಧ ಗ್ರಾಮದ ಉಡಚಪ್ಪ ಸಣ್ಣನಿಂಗಪ್ಪ ಪರಸಣ್ಣವರ ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ಬಂಧಿಸಿದ್ದಾರೆ.