ವಿದ್ಯಾವಂತ ನೌಕರನಾಗಿ ದೇಶದ ಪ್ರತಿಯೊಬ್ಬ ಪ್ರಜೆ ಧರ್ಮ, ಜಾತಿ, ಲಿಂಗ ಭೇದವಿಲ್ಲದೆ ಸ್ವತಂತ್ರವಾಗಿ ಜೀವಿಸಲು ಬೇಕಾದ ಉತ್ತಮ ಸಂವಿಧಾನ ರಚಿಸಿಕೊಟ್ಟಅಂಬೇಡ್ಕರ್ ಬಗ್ಗೆ ತುಂಬಾ ಅವಹೇಳನಕಾರಿಯಾಗಿ ಮಾತನಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ಬಿಟ್ಟು ದೇಶ ವಿದೇಶಗಳಲ್ಲಿ ಚರ್ಚೆಯಾಗುವಂತೆ ಮಾಡಿರುವುದು ದೇಶದ ಜನರು ತಲೆತಗ್ಗಿಸುವಂತಾಗಿದೆ.

ಮಂಡ್ಯ:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವೇದಮೂರ್ತಿಯನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಜೈ ಭೀಮ್ ಮಾದಿಗ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಸ್ಪಿ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ವೇದಮೂರ್ತಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಿ ಸಾರ್ವಜನಿಕವಾಗಿ ನೇಣಿಗೆ ಹಾಕಬೇಕು ಎಂದು ಆಗ್ರಹಿಸಿದರು.

ವಿದ್ಯಾವಂತ ನೌಕರನಾಗಿ ದೇಶದ ಪ್ರತಿಯೊಬ್ಬ ಪ್ರಜೆ ಧರ್ಮ, ಜಾತಿ, ಲಿಂಗ ಭೇದವಿಲ್ಲದೆ ಸ್ವತಂತ್ರವಾಗಿ ಜೀವಿಸಲು ಬೇಕಾದ ಉತ್ತಮ ಸಂವಿಧಾನ ರಚಿಸಿಕೊಟ್ಟಅಂಬೇಡ್ಕರ್ ಬಗ್ಗೆ ತುಂಬಾ ಅವಹೇಳನಕಾರಿಯಾಗಿ ಮಾತನಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ಬಿಟ್ಟು ದೇಶ ವಿದೇಶಗಳಲ್ಲಿ ಚರ್ಚೆಯಾಗುವಂತೆ ಮಾಡಿರುವುದು ದೇಶದ ಜನರು ತಲೆತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿ ರಾಷ್ಟ್ರ ನಾಯಕರ ಬಗ್ಗೆ ಅವಹೇನ ಮಾತುಗಳಿಂದ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಗಲಾಟೆ ಮಾಡಿಸಲು ಹುನ್ನಾರ ನಡೆಯುತ್ತಿದೆ. ಆರೋಪಿಯನ್ನು ದೇಶದ್ರೋಹಿ ಪ್ರಕರಣದಡಿ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡುವುದಾಗಿ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಎಸ್ಪಿ ಅವರು, ಈ ವಿಷಯವನ್ನು ಗಂಭಿರವಾಗಿ ತೆಗೆದುಕೊಂಡು ಕಿಡಿಗೇಡಿಯನ್ನು ಬಂಧಿಸಿದ್ದೇವೆ. ಆರೋಪಿಯನ್ನು ತನಿಖೆಗೆ ಒಳಪಡಿಸಿ ಕಠಿಣ ಶಿಕ್ಷೆ ಆಗುವಂತೆ ಕ್ರಮ ತೆಗೆದುಕೊಳ್ಳಲಾಗವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ತಾಳಶಾಸನ ಮೋಹನ್, ಜೈ ಭೀಮ್ ಮಾದಿಗ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷ ನಂಜುಂಡ ಮೌರ್ಯ, ದಸಂಸ ಮುಖಂಡರಾದ ನಲ್ಲಹಳ್ಳಿ ಸ್ವಾಮಿ, ಎಂ.ವಿ.ಕೃಷ್ಣ, ಸಿದ್ದರಾಜು, ಗಂಗರಾಜು, ಬಾಲರಾಜು,ವಿಜಯ್ ಕುಮಾರ್, ಸುದಾನುಮ,ಶಾಂತರಾಜು, ಜೈ ಸುಧಾ, ಚೇತನ್, ಮಂಜುಳಾ, ಸುಲೋಚನಾ, ನೂರಾರು ಕಾರ್ಯಕರ್ತರು ಇದ್ದರು.