ಅವಹೇಳನಕಾರಿ ಹೇಳಿಕೆ: ಮೂಡುಬಿದಿರೆಯಲ್ಲಿ ಭಜನಾ ಪರಿಷತ್ ಪ್ರತಿಭಟನಾ ಮೆರವಣಿಗೆ

| Published : Oct 28 2024, 12:54 AM IST

ಸಾರಾಂಶ

ಸಾವಿರ ಕಂಬದ ಬಸದಿಯಿಂದ ಸ್ವರಾಜ್ಯ ಮೈದಾನದವರೆಗೆ ಕುಣಿತ ಭಜನೆಯ ತಂಡಗಳು ದೇವರ ನಾಮಸ್ಮರಣೆಯನ್ನು ಮಾಡುತ್ತಾ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಅವಿವೇಕಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಭಜನೆಯ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಅವಹೇಳನಕಾರಿ ಹೇಳಿಕೆ ನೀಡಿರುವ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಮತ್ತು ಭಜನೆಯ ವಿರುದ್ಧ ಮಾತನಾಡುವ ದುಷ್ಟಶಕ್ತಿಗಳನ್ನು ಖಂಡಿಸಿ ಭಜನಾ ಪರಿಷತ್ತು ಮೂಡುಬಿದಿರೆ ತಾಲೂಕು ವತಿಯಿಂದ ಮತ್ತು ಜಿಲ್ಲೆಯ ವಿವಿಧ ಕುಣಿತ ಭಜನಾ ತಂಡಗಳಿಂದ ಮೂಡುಬಿದಿರೆಯಲ್ಲಿ ಭಾನುವಾರ ಸಂಜೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಹಿಂದೂ ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಕೂಚಿ ಭಾಷಣ ಮಾಡಿದರು.

ಸಾವಿರ ಕಂಬದ ಬಸದಿಯಿಂದ ಸ್ವರಾಜ್ಯ ಮೈದಾನದವರೆಗೆ ಕುಣಿತ ಭಜನೆಯ ತಂಡಗಳು ದೇವರ ನಾಮಸ್ಮರಣೆಯನ್ನು ಮಾಡುತ್ತಾ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಅವಿವೇಕಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖ‌ರ್, ತಾಲೂಕು ಅಧ್ಯಕ್ಷ ಲಕ್ಷ್ಮಣ್ ಸುವರ್ಣ, ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ, ವಿಶ್ವಹಿಂದು ಪರಿಷತ್‌ ಕಾರ್ಯಾಧ್ಯಕ್ಷ ಶಾಮ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ರಮಿತಾ ಶೈಲೇಂದ್ರ ಕಾರ್ಕಳ, ಹಿಂದು ಸಂಘಟನೆ ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಸುಚೇತನ್‌ ಜೈನ್, ರಂಜಿತ್‌ ಪೂಜಾರಿ ತೋಡಾರು, ಅಶೋಕ್ ಶೆಟ್ಟಿ ಬೇಲೂಟ್ಟು, ಮಂಜುನಾಥ್ ಬೆಳುವಾಯಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.