ಸಾರಾಂಶ
ಚಾಮರಾಜನಗರ: ಲಕ್ಷ್ಮೀಯನ್ನು ಮನೆಗೆ ಬರಮಾಡಿಕೊಳ್ಳುವ, ಶ್ರಾವಣಮಾಸದ ಮೊದಲ ಹಬ್ಬ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಗಗನಕ್ಕೇರಿದ ಪೂಜಾ ಸಾಮಗ್ರಿಗಳ ಬೆಲೆಗಳ ನಡುವೆಯೂ ಜಿಲ್ಲಾ ಕೇಂದ್ರದಲ್ಲಿ ಸಾರ್ವಜನಿಕರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.

ಹೆಂಗಳೆಯರ ಪ್ರಮುಖ ಹಬ್ಬ ಎನಿಸಿರುವ ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಗುರುವಾರವೇ ಸಿದ್ಧತೆ ನಡೆಸಿರುವ ಮಹಿಳೆಯರು ನಗರದ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಹಳೇ ಖಾಸಗಿ ಬಸ್ ಆವರಣದಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಹಬ್ಬಕ್ಕೆ ಬೇಕಾದ ಪದಾರ್ಥಗಳು, ಹೂವು ಹಣ್ಣು ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿಸಿದರು. ವರಮಹಾಲಕ್ಷ್ಮೀ ಹಬ್ಬವಾದ್ದರಿಂದ ಹೂವಿಗೆ ಹೆಚ್ಚು ಬೇಡಿಕೆ ಇದ್ದು, ಬೆಲೆ ಬೇರೆ ದಿನಗಳಿಗೆ ಹೋಲಿಸಿದರೆ ಗುಣಗೊಂಡಿತ್ತು, ಮೀಟರ್‌ಗೆ ಕನಿಷ್ಠ ೧೦೦ರು. ರಿಂದ ೩೦೦ ರು. ವರೆಗೆ ಇತ್ತು, ಬಾಳೆಹಣ್ಣು ಕೇಜಿಗೆ ೧೬೦ರು. ಹಣ್ಣು ತರಕಾರಿಗಳ ಬೆಲೆಯಲ್ಲೂ ಏರಿಕೆಯಾಗಿದೆ. ಜವಳಿ ಮಳಿಗೆಗಳಲ್ಲಿ ಹಬ್ಬದ ದಿನದಂದು ಮುತ್ತೈದೆಯರಿಗೆ ಅರಿಶಿಣ ಕುಂಕುಮದೊಂದಿಗೆ ನೀಡುವ ರವಿಕೆ ಬಟ್ಟೆ ಕೊಳ್ಳುವುದರಲ್ಲಿ ಮಹಿಳೆಯರು ನಿರತರಾಗಿದ್ದರು. ಹೊಸದಾಗಿ ಲಕ್ಷ್ಮೀ ಇರುವ ಭಾವಚಿತ್ರ, ಮುಖವಾಡ ಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.ತಮ್ಮ ಶಕ್ತ್ಯಾನುಸಾರ ಚಿನ್ನ, ಬೆಳ್ಳಿ, ಮೆಟಲ್ ಲಕ್ಷ್ಮೀ ಮುಖವಾಡ ಖರೀದಿಸಿದರು. ಮುತ್ತೈದೆಯರಿಗೆ ನೀಡಲು ಬಳೆಗಳ ಖರೀದಿಯೂ ಜೋರಾಗಿತ್ತು. ದಾಳಿಂಬೆ, ಸೇಬು, ಬಾಳೆಹಣ್ಣು, ಮೋಸಂಬಿ ಕಿತ್ತಳೆ ಸೇರಿದಂತೆ ವಿವಿಧ ಹಣ್ಣುಗಳ ಬೆಲೆಯೂ ಏರಿಕೆಯಾಗಿವೆ.