ಡೆಂಘೀ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಅಗತ್ಯ: ವೈದ್ಯಾಧಿಕಾರಿ ಡಾ.ಪಿ.ಮಾರುತಿ ಕರೆ

| Published : May 17 2025, 02:00 AM IST

ಡೆಂಘೀ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಅಗತ್ಯ: ವೈದ್ಯಾಧಿಕಾರಿ ಡಾ.ಪಿ.ಮಾರುತಿ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಡೆಂಘೀ ಜ್ವರಕ್ಕೆ ಕಾರಣವಾಗಿರುವ ಈಡಿಸ್ ಇಜಿಪ್ಟೈ ಎಂಬ ಸೊಳ್ಳೆ ಘನತಾಜ್ಯಗಳಲ್ಲಿ ಮಳೆ ನೀರು ಸಂಗ್ರಹಣೆ, ಪ್ರೇಕ್ಷಣೀಯ ಸ್ಥಳಗಳಲ್ಲಿನ ಎಳನೀರು ಬುರುಡೆ, ಹಳೆಯ ಅನುಪಯುಕ್ತ ಟೈಯರಗಳಲ್ಲಿ ಮಳೆ ನೀರು ತುಂಬಿರುತ್ತವೆ ಎಂದು ತಿಳಿಸಿ, ಮರಗಳ ಪೊಟರೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ಸೊಳ್ಳೆಗಳು ಉತ್ಪತ್ತಿ ತಾಣಗಳಾಗಿ ಮಾರ್ಪಾಡಾಗುವುದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ನಿರ್ದಿಷ್ಟ ಚಿಕಿತ್ಸೆ ಇಲ್ಲದ ಡೆಂಘೀ ಜ್ವರ ನಿಯಂತ್ರಿಸಲು ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಒಂದೇ ಮಾರ್ಗ. ಸಾರ್ವಜನಿಕರು ಡೆಂಘೀಯನ್ನು ಸೋಲಿಸಲು ಸನ್ನದ್ಧರಾಗಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಕರೆ ನೀಡಿದರು.

ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಪುರಸಭೆ ವತಿಯಿಂದ ರಾಷ್ಟ್ರೀಯ ಡೆಂಘೀ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರು, ಸ್ವಚ್ಛತಾ ಕಾರ್ಮಿಕರಿಗೆ ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಈಡಿಸ್ ಲಾರ್ವ ನಿರ್ಮೂಲನೆ ಕುರಿತು ನಡೆದ ಪುನರ್ ಮನನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ ಮಾತನಾಡಿ, ಡೆಂಘೀ ಬರದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಡೆಂಘೀ ಜ್ವರಕ್ಕೆ ಕಾರಣವಾಗಿರುವ ಈಡಿಸ್ ಇಜಿಪ್ಟೈ ಎಂಬ ಸೊಳ್ಳೆ ಘನತಾಜ್ಯಗಳಲ್ಲಿ ಮಳೆ ನೀರು ಸಂಗ್ರಹಣೆ, ಪ್ರೇಕ್ಷಣೀಯ ಸ್ಥಳಗಳಲ್ಲಿನ ಎಳನೀರು ಬುರುಡೆ, ಹಳೆಯ ಅನುಪಯುಕ್ತ ಟೈಯರಗಳಲ್ಲಿ ಮಳೆ ನೀರು ತುಂಬಿರುತ್ತವೆ ಎಂದು ತಿಳಿಸಿ, ಮರಗಳ ಪೊಟರೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ಸೊಳ್ಳೆಗಳು ಉತ್ಪತ್ತಿ ತಾಣಗಳಾಗಿ ಮಾರ್ಪಾಡಾಗುವುದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಾಗಾರದಲ್ಲಿ ಪುರಸಭೆ ಆರೋಗ್ಯ ನಿರೀಕ್ಷಕ ದರ್ಶನ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್, ಎಂ.ಎನ್ ಕೃಷ್ಣೇಗೌಡ, ಮೇಘನಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಹದೇವಮ್ಮ, ಸ್ಮಿತಾ, ಆಶಾ ಕಾರ್ಯಕರ್ತೆ ಮೀನಾ, ಅಶ್ವಿನಿ ಹಾಗೂ ಪುರಸಭೆ ಪೌರಕಾರ್ಮಿಕರು ಹಾಗೂ ನೀರು ಗಂಟಿಗಳು ಭಾಗವಹಿಸಿದ್ದರು.