ಉಗ್ರರ ನೆಲೆ ಧ್ವಂಸ: ಆಪರೇಷನ್ ಸಿಂಧೂರ ಯಶಸ್ವಿ

| Published : May 08 2025, 12:33 AM IST

ಸಾರಾಂಶ

ಪಾಕಿಸ್ತಾನದ ಉಗ್ರ ನೆಲೆ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿರುವ ಭಾರತ ಸೈನಿಕರ ಒಳಿತಿಗಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬುಧವಾರ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ಮಹಿಳೆಯರಿಗೆ ಸಿಂಧೂರ ವಿತರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಪಾಕಿಸ್ತಾನದ ಉಗ್ರ ನೆಲೆ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿರುವ ಭಾರತ ಸೈನಿಕರ ಒಳಿತಿಗಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬುಧವಾರ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ಮಹಿಳೆಯರಿಗೆ ಸಿಂಧೂರ ವಿತರಣೆ ಮಾಡಿದರು.ಈ ವೇಳೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಹಿಂದೂ ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಭಾರತೀಯ ಸೈನಿಕರು ಪ್ರತೀಕಾರ ತೀರಿಸಿಕೊಂಡಿದ್ದಾರೆ .ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡುವ ಆಪರೇಷನ್ ಸಿಂಧೂರ ಯಶಸ್ವಿಯಾಗಿದೆ ಎಂದರು.ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದಾರೆ. ಪತ್ನಿಎದುರೇ ಗಂಡನನ್ನು ಅಮಾನುಷವಾಗಿ ಕೊಂದು ಮಹಿಳೆಯ ಕುಂಕುಮ ಅಳಿಸಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಭಾರತೀಯ ಸೈನಿಕರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡಿ ಪಾಕಿಸ್ತಾನದ ಉಗ್ರರ ನೆಲೆಗಳನ್ನು ನಾಶ ಮಾಡಿ ವಿಜಯ ಸಾಧಿಸಿದ್ದಾರೆ ಎಂದು ಹೇಳಿದರು.ಹಿಂದೂ ಮಹಿಳೆಯರ ಕುಂಕುಮ ಅಳಿಸಿದ ಭಯೋತ್ಪಾದಕರಿಗೆ ನಮ್ಮ ಸೈನಿಕರು ತಕ್ಕ ಶಾಸ್ತಿ ಮಾಡುತ್ತಾರೆ. ಸಿಂಧೂರದ ಮಹತ್ವ ಸಾರಲು ರೇಣುಕಾಚಾರ್ಯ ಅವರು ಈ ವೇಳೆ ಮಹಿಳೆಯರಿಗೆ ಕುಂಕುಮ ವಿತರಿಸಿ ಗೌರವಿಸಿದರು.ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್.ಸದಾಶಿವಯ್ಯ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್, ಮುಖಂಡರಾದ ಚಂದನ್ ಪಟೇಲ್, ರಾಯರಪಾಳ್ಯ ಮಹೇಶ್ ಮೊದಲಾದವರಿದ್ದರು.