ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ

| Published : Jun 03 2024, 12:30 AM IST

ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ
Share this Article
  • FB
  • TW
  • Linkdin
  • Email

ಸಾರಾಂಶ

ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ತಗ್ಗು ದಿನ್ನೆಗಳಿಂದ ಕೂಡಿದ್ದು, ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಕಳೆದ ವರ್ಷ ಗುಂಪು ಕಾಮಗಾರಿಯೊಂದಿಗೆ ಸೇರಿಸಿ ಟೆಂಡರ್ ನಡೆಸಲಾಗಿತ್ತು. ಗುತ್ತಿಗೆದಾರರು ಕೂಡ 900 ಮೀ. ಉದ್ದದ ಈ ರಸ್ತೆಗೆ ದಪ್ಪ ಜಲ್ಲಿ ಸುರಿಯುವ ಮೂಲಕ ಕಾಮಗಾರಿಯನ್ನು ಪ್ರಾರಂಭಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಯಾವುದೇ ಚಟುವಟಿಕೆ ಇಲ್ಲದೇ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ವಾಹನಗಳು ಮತ್ತು ಸಾರ್ವಜನಿಕರು ಪರದಾಟ ನಡೆಸಿದ್ದಾರೆ.

ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ಇದೊಂದು ಮುಖ್ಯ ರಸ್ತೆಯಾಗಿದ್ದು, ಅಲ್ಲದೇ ಸೀಮೆ ಲಕ್ಕವ್ವದೇವಿ ದೇವಸ್ಥಾನಕ್ಕೆ, ಹಾಗೂ ಪ್ರಾಥಮಿಕ ಶಾಲೆಗೆ ಬರಲು ಇದೇ ರಸ್ತೆಯಲ್ಲಿಯೇ ಬರಬೇಕು. ಜಲ್ಲಿ ತುಂಬಿದ್ದರಿಂದ ಸಂಚಾರ ಕಷ್ಟ. ಈ ರಸ್ತೆಯಲ್ಲಿ ಹಲವಾರು ವಿದ್ಯಾರ್ಥಿಗಳು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ, ಅಧಿಕಾರಿಗಳು ಕೂಡಲೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡು ಸಮರ್ಪಕ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.ಕೋಟ್‌ಈ ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ಇಲಾಖೆಯ ಸಂಪರ್ಕಕ್ಕೆ ಸಿಗುತ್ತಿಲ್ಲ, ಈಗಾಗಲೇ ಅವರಿಗೆ ಕಾಮಗಾರಿ ಪ್ರಾರಂಭಿಸುವಂತೆ ಲಿಖಿತ ನೋಟಿಸ್ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಈ ಗುತ್ತಿಗೆಯನ್ನು ರದ್ದುಗೊಳಿಸಿ ಮರುಟೆಂಡರ್ ನೊಂದಿಗೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.

- ಚೇತನ್ ಅಬ್ಬಿಗೇರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಿಎಲ್ಬಿಸಿ ರಬಕವಿ.