ಪಾರದರ್ಶಕ ಸಮೀಕ್ಷೆ ಕೈಗೊಂಡು ನ್ಯಾಯ ಒದಗಿಸುವ ಸಂಕಲ್ಪ: ಸಂಸದ ಜಿ.ಕುಮಾರ ನಾಯಕ

| Published : Sep 15 2025, 01:00 AM IST

ಪಾರದರ್ಶಕ ಸಮೀಕ್ಷೆ ಕೈಗೊಂಡು ನ್ಯಾಯ ಒದಗಿಸುವ ಸಂಕಲ್ಪ: ಸಂಸದ ಜಿ.ಕುಮಾರ ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಾರದರ್ಶಕವಾಗಿ ಕೈಗೊಂಡು ಎಲ್ಲರಿಗೂ ನ್ಯಾಯ ಒದಗಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಂಸದ ಜಿ.ಕುಮಾರ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಾರದರ್ಶಕವಾಗಿ ಕೈಗೊಂಡು ಎಲ್ಲರಿಗೂ ನ್ಯಾಯ ಒದಗಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಂಸದ ಜಿ.ಕುಮಾರ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಶ್ರೀ ಬಸವೇಶ್ವರ ಸಭಾಂಗಣದಲ್ಲಿ ಜಾಗೃತ ಕರ್ನಾಟಕ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಸರ್ವ ಸಮುದಾಯಗಳ ಸಾಮಾಜಿಕ ನ್ಯಾಯ ಸಂರಕ್ಷಣಾ ಅಭಿಯಾನ ನೇತೃತ್ವದಲ್ಲಿ ಆಯೋಜಿಸಿದ ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2 ಒಂದು ದಿನದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಭಾನುವಾರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ದಿ. ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆಯ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಮೂಲಕ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾರಣಕ್ಕಾಗಿ ಸಮೀಕ್ಷೆ ಪಾರದರ್ಶಕವಾಗಿ ನಡೆಯಬೇಕು ಎಂದರು.

ಹಿಂದುಳಿದ ಆಯೋಗದ ರಚನೆ ಹಿಂದೆ ಕನ್ನಡಿಗರ ಶ್ರಮವಿದೆ ಹೆಮ್ಮೆಯ ವಿಷಯವಾಗಿದೆ. ಎಲ್ಲಾ ಸಮುದಾಯದ ಜನರನ್ನು ಒಗ್ಗೂಡಿಸುವುದು ಮತ್ತು ವೇದಿಕೆ ಸಮಂತರ ವೇದಿಕೆ ಆಗಬೇಕು. ಸರ್ವೇಗೆ ಸರ್ವೆ ಸ್ಪಂದನ ನೀಡಬೇಕು ಎಂದರು. ಉಪನ್ಯಾಸಕ ಪ್ರೊ.ನಾರಾಯಣ ಅವರು ಮಾತನಾಡಿ, ಸಾಮಾಜಿಕ ಪರಿಕಲ್ಪನೆಯನ್ನು ಎತ್ತಿಹಿಡಿದ ಅಂಬೇಡ್ಕರ್ ಮತ್ತು ದಿ. ದೇವರಾಜು ಅರಸು ಅಂತಹ ಮಹಾನ್ ನಾಯಕರನ್ನು ಸ್ಮರಿಸಬೇಕು. ಇಲ್ಲದಿದ್ದರೆ ಸಮ ಸಮಾಜದ ಕನಸು ನಿರ್ಮಾಣ ಅಸಾಧ್ಯ ಎಂದು ಹೇಳಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಮಾತನಾಡಿ, ವಿಚಾರಗೋಷ್ಠಿ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಅಜೀಂ ಪ್ರೇಮ್ ಜಿ ಸಂಸ್ಥೆಯ ಪ್ರಾಧ್ಯಾಪಕ ಎ.ನಾರಾಯಣ್, ನಿವೃತ್ತ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್, ಸಣ್ಣಭತ್ತಪ್ಪ, ಮುಖಂಡರಾದ ರವಿ ಬೋಸುರಾಜು, ಮಹ್ಮದ್ ಶಾಲಾಮ್, ಜಯಣ್ಣ ಸೇರಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಮಾಜದವರು, ಸಾರ್ವಜನಿಕರು ಇದ್ದರು.