ಸಾರಾಂಶ
ಚಿಕ್ಕಮಗಳೂರು: ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ಸಾರಿದ ವಚನಕಾರ ದೇವರ ದಾಸಿಮಯ್ಯ ಅವರು ಸರ್ವ ಸಮುದಾಯಗಳಿಗೆ ಮಾದರಿ ಎಂದು ಜಿಲ್ಲಾ ನೇಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಂ. ನಾರಾಯಣ ಹೇಳಿದರು.
ಚಿಕ್ಕಮಗಳೂರು: ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ಸಾರಿದ ವಚನಕಾರ ದೇವರ ದಾಸಿಮಯ್ಯ ಅವರು ಸರ್ವ ಸಮುದಾಯಗಳಿಗೆ ಮಾದರಿ ಎಂದು ಜಿಲ್ಲಾ ನೇಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಂ. ನಾರಾಯಣ ಹೇಳಿದರು.ನಗರದ ಕುವೆಂಪು ಕಲಾಮಂದಿರದ ಹೇಮಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದೇವಾಂಗ ಸಂಘ, ಕುರುಹಿನ ಶೆಟ್ಟಿ ಸಂಘ, ನೇಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ದೇವರ ದಾಸಿಮಯ್ಯನವರ 1046 ನೇ ಜಯಂತಿಯಲ್ಲಿ ಮಾತನಾಡಿದರು. ದೇವರ ದಾಸಿಮಯ್ಯ ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದ್ದರು. ದಾಸಿಮಯ್ಯನವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ ಎಂದು ಹೇಳಿದರು.
ವಚನಗಳ ಮೂಲಕ ಜಾತಿ, ಧರ್ಮಗಳ ವಿರುದ್ಧ ಸಿಡಿದೆದ್ದು ಎಲ್ಲರೂ ಸಮಾನರು ಎಂದು ಸಾರಿದ ದೇವರ ದಾಸಿಮಯ್ಯ ಸಾಮಾಜಿಕ ಕ್ರಾಂತಿಗೆ ಬುನಾದಿ ಹಾಕಿದವರು. ವಿಶ್ವದ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು. ಅಂಧಕಾರದಿಂದ ಜ್ಞಾನದ ಕಡೆಗೆ ಅಂದಿನ ಶತಮಾನದಲ್ಲಿಯೇ ಹೋರಾಡಿದ ಹಿರಿಮೆ ಅವರದಾಗಿತ್ತು ಎಂದು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಟಿ.ಶಿವರಾಂ, ಖಜಾಂಚಿ ಶಿವರುದ್ರಪ್ಪ, ರಾಜ್ಯ ನಿರ್ದೇಶಕ ಹರೀಶ್ ಕುಮಾರ್, ಜಂಟಿ ಕಾರ್ಯದರ್ಶಿ ಸಿ.ಎಸ್.ರವಿಕುಮಾರ್, ಪತ್ರಿಕಾ ಕಾರ್ಯದರ್ಶಿ ಬಿ.ಎಂ.ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್ ಉಪಸ್ಥಿತರಿದ್ದರು.3 ಕೆಸಿಕೆಎಂ 3ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದ ಹೇಮಾಂಗಣ ಸಭಾಂಗಣದಲ್ಲಿ ದೇವರ ದಾಸಿಮಯ್ಯನವರ 1046 ನೇ ಜಯಂತಿ ಕಾರ್ಯಕ್ರಮ ನಡೆಯಿತು.