ದೇವನಹಳ್ಳಿ ರೈತ ಹೋರಾಟಗಾರರ ಬಿಡುಗಡೆಗೊಳಿಸಲು ಆಗ್ರಹಿಸಿ ಪ್ರತಿಭಟನೆ

| Published : Jul 01 2025, 12:47 AM IST

ದೇವನಹಳ್ಳಿ ರೈತ ಹೋರಾಟಗಾರರ ಬಿಡುಗಡೆಗೊಳಿಸಲು ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ದೇವನಹಳ್ಳಿ ರೈತ ಹೋರಾಟಗಾರರನ್ನು ಬಿಡುಗಡೆಗೊಳಿಸಿ, ಭೂ ಸ್ವಾಧಿನ ಪ್ರಕ್ರಿಯೆಯಿಂದ ದೂರ ಸರಿಯಬೇಕು ಎಂದು ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಸಂಘಟನೆಯ ಮುಖಂಡರು ದೇವನಹಳ್ಳಿಯಲ್ಲಿ 1720 ಎಕರೆ ಕೃಷಿ ಭೂಮಿಯನ್ನು ಹಿಂದಿನ ಬಿಜೆಪಿ ಸರ್ಕಾರ ವಶಪಡಿಸಿಕೊಂಡಿತು. ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಈ ಕೃಷಿ ಭೂಮಿಯನ್ನು ರೈತರಿಗೆ ಹಿಂದಿರುಗಿಸುವ ಭರವಸೆ ನೀಡಿದರು. ಆದರೆ ಬಿಜೆಪಿ ಸರಕಾರ ತಂದಿದ್ದ ನೀತಿಯನ್ನೇ ಕಾಂಗ್ರೆಸ್ ಸರಕಾರ ಕೂಡ ಮುಂದುವರೆಸುತ್ತಿರುವುದರ ವಿರುದ್ಧ ಹೋರಾಟಕ್ಕೆ ಮುಂದಾದ ರೈತರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಅಲ್ಲದೆ ಕೃಷಿ ಭೂಮಿಯನ್ನು ಹಿಂತಿರುಗಿಸಲ್ಲ ಎಂದು ಕೂಡ ಹೇಳುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ ಸಿಐಟಿಯು ರಾಜ್ಯಾಧ್ಯಕ್ಷರಾದ ವರಲಕ್ಷ್ಮಿ ಹಾಗೂ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಸೇರಿದಂತೆ ಹೋರಾಟಗಾರರನ್ನು ಬಂಧಿಸಿರುವುದಕ್ಕೆ ತೀವ್ರ ಖಂಡನೆ ವ್ಯಕ್ತ ಪಡಿಸಿದರು.

ಜಿಲ್ಲಾ ಸಂಘಟನೆಯ ಪ್ರಮುಖರಾದ ದುರ್ಗಾ ಪ್ರಸಾದ್, ರಮೇಶ್.ಹೆಚ್.ಬಿ, ಶಾಬು, ಎ. ಮಹದೇವ್, ಅಪ್ಪಾಜಿ, ಕುಟ್ಟಪ್ಪ ಹಾಗೂ ಕಾರ್ಯಕರ್ತರಾದ ಸೀನಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.