ತಾಪಂ ತಾಲೂಕು ಆಡಳಿತ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ: ತಾಪಂ ತಾಲೂಕು ಆಡಳಿತ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ "ಶೋಷಿತ ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ದೇವರಾಜ ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿದೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ಕಾರ್ಯವನ್ನು ಮಾಡಿದ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು " ಎಂದು ಹೇಳಿದರು.
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಉಜಿರೆಯ ವಿದ್ಯಾರ್ಥಿನಿ ಪ್ರಿಯಾ ಮಾತನಾಡಿ "ಶ್ರಮಿಕ ವರ್ಗದವರಿಗೆ ಅಧಿಕಾರ ನೀಡಿದ ರಾಜಕಾರಣಿ ದೇವರಾಜ ಅರಸು ಅವರಾಗಿದ್ದಾರೆ. ತಮ್ಮದೇ ಆದ ಕಾರ್ಯ ಯೋಜನೆಗಳ ಮೂಲಕ ಅವರು ಶೋಷಿತ ಸಮುದಾಯಗಳನ್ನು ಸಬಲರಾಗಿಸುವ ಕಾರ್ಯ ಮಾಡಿದ್ದಾರೆ. ಅವರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ತಲುಪಿದೆ " ಎಂದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಲಕ್ಷ್ಮಿ ಹಾಗೂ ಇತರರು ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್ ಸ್ವಾಗತಿಸಿದರು.