ಆಗಸ್ಟ್‌ 20ರಂದು ದೇವರಾಜ ಅರಸು ಜನ್ಮ ದಿನಾಚರಣೆ

| Published : Aug 08 2025, 01:02 AM IST

ಆಗಸ್ಟ್‌ 20ರಂದು ದೇವರಾಜ ಅರಸು ಜನ್ಮ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಆ. 20ರಂದು ನಡೆಯಲಿದ್ದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ:

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಆ. 20ರಂದು ನಡೆಯಲಿದ್ದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಮಟ್ಟದ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಸಾಗುವ ಮಾರ್ಗದ ರಸ್ತೆ ಹಾಗೂ ಸಾಹಿತ್ಯ ಭವನದ ಆವರಣ ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಕಾರ್ಯಕ್ರಮ, ಮೆರವಣಿಗೆ ಸಾಗುವ ಮಾರ್ಗಕ್ಕೆ ಪೊಲೀಸ್‌ ಬಂದೋಬಸ್ತ್, ಡಿ. ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ಏರ್ಪಡಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ನಿಲಯಾರ್ಥಿಗಳನ್ನು ಗುರುತಿಸಿ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ, ಕ್ರೀಡಾ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ನಾಗಮಣಿ ಮಾತನಾಡಿ, ಅಂದು ಬೆಳಗ್ಗೆ 8.30ಕ್ಕೆ ದೇವರಾಜ ಅರಸು ಭಾವಚಿತ್ರದ ಮೆರವಣಿಗೆ ಗವಿಮಠದಿಂದ ಸಾಹಿತ್ಯ ಭವನದ ವರೆಗೆ ನಡೆಯಲಿದೆ. 10.30ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕರಿಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಕೊಪ್ಪಳ ತಾಲೂಕಾಧಿಕಾರಿ ನಾಗರತ್ನ, ವಿಸ್ತರಣಾಧಿಕಾರಿ ರಮೇಶ ಹುಬ್ಬಳ್ಳಿ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.