ದೇವರಾಜ ಅರಸು ಸಾಮಾಜಿಕ ಅಭಿವೃದ್ಧಿ ಹರಿಕಾರರು

| Published : Aug 23 2025, 02:01 AM IST

ಸಾರಾಂಶ

ಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.

ಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.

ನಗರದ ಶತಮಾನೋತ್ಸವ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು

೧೧೦ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜು ಅರಸು ಅವರ ಜೀವನ, ಬದುಕು, ದೂರದೃಷ್ಠಿ, ಸಾಮಾಜಿಕ ಕಳಕಳಿ, ಬದ್ಧತೆ, ರಾಜಕೀಯ ಜೀವನವನ್ನು ಮೆಲುಕು ಹಾಕಿದ ಅವರು, ದೇವರಾಜ ಅರಸು ನಿಜವಾದ ಸಮಾಜವಾದಿಯಾಗಿದ್ದರು. ನುಡಿದಂತೆ ನಡೆದ ಪ್ರಬುದ್ಧ ರಾಜಕಾರಣಿ. ಗ್ರಾಮೀಣ, ಹಿಂದುಳಿದ ಬಡ ಮಕ್ಕಳು ವ್ಯಾಸಂಗದಿಂದ ವಂಚಿತರಾಗಬಾರದು ಎಂದು ರಾಜ್ಯದಾದ್ಯಂತ ನೂರಾರು ವಸತಿ ನಿಲಯಗಳನ್ನು ಪ್ರಾರಂಭ ಮಾಡಿ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಟ್ಟು ಹಿಂದುಳಿದ ಮಕ್ಕಳ ಬಾಳಿಗೆ ಬೆಳಕಾದವರು. ಜೀತ ಪದ್ಧತಿ ನಿರ್ಮೂಲನೆ, ಉಳುವವನೇ ಭೂಒಡೆಯ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಸಾಮಾಜಿಕ ಕ್ರಾಂತಿ ಮಾಡಿದವರು ಎಂದು ಹೇಳಿದರು.

ತಹಸೀಲ್ದಾರ್ ಬಿ.ಎನ್.ಗಿರೀಶ್ ಮಾತನಾಡಿ, ದೇವರಾಜು ಅರಸು ಅವರನ್ನು ಸ್ಮರಿಸಿಕೊಂಡು ನಾವುಗಳು ವಿದ್ಯಾವಂತರಾಗುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು.

ನಗರಸಭಾ ಅಧ್ಯಕ್ಷ ವಾಸಿಲ್‌ ಆಲಿ ಖಾನ್ ಅಧ್ಯಕ್ಷತೆಯಲ್ಲಿ ದೇವರಾಜು ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬಿಸಿಎಂ ವಿದ್ಯಾರ್ಥಿ ನಿಲಯಗಳಲ್ಲಿ ಓದಿ ಅತಿ ಹೆಚ್ಚ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ

ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಹೇಂದ್ರ, ಬಿಇಒ ಕೆ ರಾಮಲಿಂಗಯ್ಯ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ್ಷ ಎಸ್.ಆರ್.ಪ್ರಮೋದ್, ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಸಿ.ಶೇಖರ್, ಜಿಪಂ ಮಾಜಿ ಸದಸ್ಯ ಕೃಷ್ಣಪ್ಪ, ಅಹಿಂದ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುಕುಂದ, ಹಿಂದುಳಿದ ಕಲ್ಯಾಣ ಇಲಾಖೆ ನಿವೃತ್ತ ಜಿಲ್ಲಾ ಅಧಿಕಾರಿ

ಮೋಹನ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಸುಧೀಂದ್ರ, ಹಿಂದುಳಿದ ಸಮುದಾಯದ ಸಂಘಟನೆಗಳ ಮುಖಂಡರಾದ ಎಲೇಕೇರಿ ಈಶ್ವರ್, ರಾಜು, ಸಿದ್ದಮಾರಪ್ಪ, ಸುಗಂದರಾಜೇ ಅರಸು ಉಪಸ್ಥಿತರಿದ್ದರು.

ಪೊಟೋ೨೧ಸಿಪಿಟಿ೧:

ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ೧೧೦ನೇ ಜನ್ಮ ದಿನಾಚರಣೆಯನ್ನು ಗಣ್ಯರು ಉದ್ಘಾಟಿಸಿದರು.