ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಇಗ್ಗಲೂರು ಅಣೆಕಟ್ಟು ನಿರ್ಮಾಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೊಡುಗೆ ಅಪಾರವಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಯಾವುದೇ ಪಾತ್ರವಿಲ್ಲ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪಕ್ಷದ ಕಾರ್ಯಕತರೊಂದಿಗೆ ಪ್ರಚಾರಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಗ್ಗಲೂರು ಅಣೆಕಟ್ಟು ನಿರ್ಮಾಣದಲ್ಲಿ ದೇವೇಗೌಡ ಯಾವುದೇ ಕೊಡುಗೆ ಇಲ್ಲ ಎಂಬ ಶಾಸಕ ಕೆ.ಎಂ.ಉದಯ್ ಅವರ ಟೀಕೆಗೆ ತಿರುಗೇಟು ನೀಡಿದರು.
1985ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತಿಯಾಗಿದ್ದರು. ಆ ಸಂದರ್ಭಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ ದೇವೇಗೌಡರು ಇಗ್ಗಲೂರು ಅಣೆಕಟ್ಟು ನಿರ್ಮಾಣ ಹಾಗೂ ಸೇತುವೆ ನಿರ್ಮಿಸಲಾಗಿತ್ತು ಎಂದರು.ಎಚ್.ಡಿ.ದೇವೇಗೌಡರು 1972ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಈ ಬಗ್ಗೆ ಕನಿಷ್ಠ ಜ್ಞಾನವು ಇಲ್ಲದ ಮದ್ದೂರು ಕ್ಷೇತ್ರದ ಶಾಸಕರು ಅಣೆಕಟ್ಟು ನಿರ್ಮಾಣದ ಬಗ್ಗೆ ದೇವೇಗೌಡರ ವಿರುದ್ಧ ಟೀಕೆ ಮಾಡುವ ಭರದಲ್ಲಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದರೆ ಎಂದು ಲೇವಡಿ ಮಡಿದರು.
ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆಗ ನಾನು ಮದ್ದೂರು ಕ್ಷೇತ್ರ ಶಾಸಕನಾಗಿ ಆಯ್ಕೆಯಾಗಿ ನೂರಾರು ಕೋಟಿ ರು.ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ. ಅದರೆ, ಕ್ಷೇತ್ರದ ಶಾಸಕರು ನಾನು ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಅಭಿವೃದ್ಧಿ ಎಂದು ಬೋರ್ಡ್ ಹಾಕಿಕೊಂಡು ಓಡಾಡುತ್ತಿದ್ದಾರೆ ಎಂದು ಡಿ.ಸಿ.ತಮ್ಮಣ್ಣ ಪರೋಕ್ಷವಾಗಿ ಶಾಸಕ ಉದಯ್ ರನ್ನು ಟೀಕಿಸಿದರು.ಈ ವೇಳೆ ಜೆಡಿಎಸ್ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಪುರಸಭಾ ಸದಸ್ಯ ಎಸ್.ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಸಂದ್ರ, ಮುಖಂಡರಾದ ಕೆ.ಟಿ.ಶೇಖರ್, ಅಪ್ಪುಪಿ.ಗೌಡ, ಕ್ಯಾತಘಟ್ಟ, ಗಿರೀಶ್ ಸೇರಿದಂತೆ ಹಲವರು ಇದ್ದರು.ಇಗ್ಗಲೂರು ಅಣೆಕಟ್ಟೆ ನಿರ್ಮಾಣದಲ್ಲಿ ದೇವೇಗೌಡರ ಪಾತ್ರವಿಲ್ಲ: ಕೆ.ಎಂ.ಉದಯ್
ಮದ್ದೂರು: ಇಗ್ಗಲೂರು ಅಣೆಕಟ್ಟು ನಿರ್ಮಾಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪಾತ್ರವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ತಾಲೂಕಿನ ಕದಲೂರು ಗ್ರಾಮದಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಗ್ಗಲೂರು ಅಣೆಕಟ್ಟು ನಿರ್ಮಾಣವಾಗಿದೆ. ಅರಸು ನಂತರ ಮುಖ್ಯಮಂತ್ರಿ ಆಗಿದ್ದ ಗುಂಡೂರಾವ್ ಅವರು ಅಣೆಕಟ್ಟೆಗೆ ಅನುದಾನ ನೀಡಿದ್ದರು. ಹೀಗಾಗಿ ಅಣೆಕಟ್ಟೆ ಉದ್ಘಾಟನೆ ವೇಳೆ ದೇವೇಗೌಡರು ಸಚಿವರಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆದರೆ, ದೇವೇಗೌಡರ ಯಾವುದೇ ಕೊಡುಗೆ ಇಲ್ಲ ಎಂದು ಟೀಕಿಸಿದರು.