ಸಾರಾಂಶ
ಬಿಜೆಪಿ-ಜೆಡಿಎಸ್ ಸಮನಯ್ವ ಸಭೆಯಲ್ಲಿ ಮಾಜಿ ಸಚಿವ ಜೀವರಾಜ್ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಮಾಜಿ ಪ್ರದಾನಿ ದೇವೇಗೌಡರ ಸಮ್ಮುಖದಲ್ಲಿ ಆದಂತಹ ಬಿಜೆಪಿ ಜೆಡಿಎಸ್ ಮೈತ್ರಿ ಬಹುಕಾಲ ನಿಲ್ಲುವಂತದ್ದು, ಇದು ಕರ್ನಾಟಕದ ರಾಜಕೀಯದ ದಿಕ್ಕು ದೆಸೆಗಳನ್ನೆ ಬದಲಿಸುವಂತಹದ್ದು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.ಪಟ್ಟಣದ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ದೇವೇಗೌಡರ ಧೀರ್ಘ ಕಾಲದ ರಾಜಕೀಯದ ಅನುಭವ ಮತ್ತು ಮಾರ್ಗದರ್ಶನ ಈ ಮೈತ್ರಿಯ ಮೇಲಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವತಃ ದೇವೆಗೌಡರನ್ನು ಪ್ರೀತಿಯಿಂದ ಅವರ ಹಿರಿತನಕ್ಕೆ ಗೌರವಿಸುವ ಕಾರಣ ದಿಂದಾಗಿ ಈ ಮೈತ್ರಿ ಕಾಲಕಾಲಕ್ಕೆ ಗಟ್ಟಿಗೊಳ್ಳುತ್ತ ಹೋಗುತ್ತದೆ.ಜಿಲ್ಲೆಯಲ್ಲಿ ಬಿಜೆಪಿ, ಜೆಡಿಎಸ್ ಈ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತಿದ್ದು, ಈ ಹಿಂದೆ ಮೈತ್ರಿ ಏರ್ಪಡುವುದಕ್ಕೂ ಮುನ್ನ ಇದ್ದ ಸ್ಥಳೀಯ ಸಣ್ಣ ಪುಟ್ಟ ಮನಸ್ತಾಪಗಳನ್ನು ಎರಡೂ ಪಕ್ಷದ ಕಾರ್ಯಕರ್ತರು ಬದಿಗೊತ್ತಿ ದೇಶದ ಹಿತಾಸಕ್ತಿಗೆ ಈ ಚುನಾವಣೆಯಲ್ಲಿ ಒಂದಾಗಿ ಮೈತ್ರಿಕೂಟದ ಅಭ್ಯರ್ಥಿಯಾದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅಭೂತ ಪೂರ್ವವಾಗಿ ಗೆಲ್ಲಿಸುವ ಜವಾಬ್ದಾರಿ ಎರಡೂ ಪಕ್ಷದ ಮೇಲಿದೆ ಎಂದರು.ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ಕೆ.ಆರ್.ದೀಪಕ್ ಮಾತನಾಡಿ, ಪಕ್ಷದ ಹಿರಿಯರ ನಿರ್ಧಾರವನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಹಾಗಾಗಿ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವಿಗೆ ಪಕ್ಷದ ಪ್ರತಿಯೊಬ್ಬರೂ ಅವಿರತ ಶ್ರಮಿಸಬೇಕು. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೋಲಿಸಲು ಪಣ ತೊಡಬೇಕು ಎಂದು ಹೇಳಿದರು.ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಭಾಸ್ಕರ್ ವೆನಿಲ್ಲಾ, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಪ್ರಣಸ್ವಿ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ, ಪಿಎಸಿಎಸ್ ನಿರ್ದೇಶಕ ಕೆ.ಟಿ.ವೆಂಕಟೇಶ್, ತಾಲ್ಲೂಕು ಬಿಜೆಪಿ ವಕ್ತಾರ ಬಿ.ಜಗದೀಶ್ಚಂದ್ರ, ಬಾಳೆಹೊನ್ನೂರು, ಖಾಂಡ್ಯ ಘಟಕದ ಜೆಡಿಎಸ್ ಅಧ್ಯಕ್ಷ ಕೆ.ಟಿ.ಗೋವಿಂದೇಗೌಡ ಮತ್ತಿತರರು ಹಾಜರಿದ್ದರು. ೦೮ಬಿಹೆಚ್‌ಆರ್ ೧: ಬಾಳೆಹೊನ್ನೂರು ವಿದ್ಯಾಗಣಪತಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್, ಕೆ.ಆರ್.ದೀಪಕ್, ಭಾಸ್ಕರ್ ವೆನಿಲ್ಲಾ, ಪ್ರಭಾಕರ್, ಟಿ.ಎಂ.ಉಮೇಶ್ ಮತ್ತಿತರರು ಇದ್ದರು.