ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ

| Published : Aug 01 2024, 12:19 AM IST

ಸಾರಾಂಶ

ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಆಗ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಬಿ,ಎಲ್,ಡಿ,ಇ ಸಂಸ್ಥೆಯ ಎಸ್‌.ಎಸ್.ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಎಸ್‌.ಎಸ್.ಪ್ರೌಢಶಾಲೆಯ ಆಡಳಿತಾಧಿಕಾರಿ ಪ್ರೊ.ಐ.ಎಸ್.ಕಾಳಪ್ಪನವರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಕೂಡ ಬಹಳ ಮುಖ್ಯ. ತಮ್ಮ ಕಲಿಕೆಯಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಜೀವನದಲ್ಲಿ ಉತ್ತಮವಾದ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಎಸ್.ಲಾಳಸೇರಿ ಕ್ರೀಡಾ ವಿಭಾಗ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಮತ್ತು ಕ್ರೀಡೆ ಒಂದು ನಾಣ್ಯದ ಎರಡು ಮುಖ ಇದ್ದಂತೆ. ಇದರಿಂದ ವಿದ್ಯಾರ್ಥಿಗಳು ಶಾರೀರಿಕವಾಗಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿ ಬೆಳೆಯುತ್ತಾರೆ ಎಂದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧೀಕ್ಷಕ ಎಸ್.ಎ.ಬಿರಾದಾರ, ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ.ಬಿರಾದಾರ, ಪ್ರಾಚಾರ್ಯ ಜೆ.ಡಿ.ಅಕಮಂಚಿ, ಉಪಪ್ರಾಚಾರ್ಯೆ ಕೆ.ಬಿ.ಪಾಟೀಲ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥೆ ಎಸ್.ಬಿ.ನಾಲವಾರ, ಕ್ರೀಡಾ ವಿಭಾಗದ ಮುಖ್ಯಸ್ಥ ಕೆ.ವಿ.ಒಡೆಯರ, ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಟಿ.ಆರ್.ಜಾನಕರ ಮತ್ತು ಎನ್.ಎಲ್.ರಾಠೋಡ ಕಾರ್ಯಕ್ರಮ ನಿರೂಪಿಸಿದರು. ಡಿ.ಕೆ.ರಾಠೋಡ ಸ್ವಾಗತಿಸಿದರು. ಎಸ್.ಡಿ.ಕೂಡವಕ್ಕಲಿಗಿ ಪರಿಚಯಿಸಿದರು. ಎಸ್.ಎಸ್.ಲಮಾಣಿ ವಂದಿಸಿದರು.