ದೇಶದ ಏಕತೆಗೆ ಭ್ರಾತೃತ್ವ ಭಾವನೆ ಬೆಳೆಸಿಕೊಳ್ಳಿ: ಪ್ರೊ. ಬಿ.ಪಿ. ಜೈನರ

| Published : Nov 05 2025, 12:30 AM IST

ದೇಶದ ಏಕತೆಗೆ ಭ್ರಾತೃತ್ವ ಭಾವನೆ ಬೆಳೆಸಿಕೊಳ್ಳಿ: ಪ್ರೊ. ಬಿ.ಪಿ. ಜೈನರ
Share this Article
  • FB
  • TW
  • Linkdin
  • Email

ಸಾರಾಂಶ

ಜನರ ನಡುವಿನ ಭಿನ್ನಾಭಿಪ್ರಾಯಗಳನ್ನು ವಿವಾದದ ಮೂಲವೆಂದು ಪರಿಗಣಿಸದೆ, ಎಲ್ಲರೂ ಒಟ್ಟಾಗಿ ಸಾಮಾನ್ಯ ಗುರಿಗಳಿಗಾಗಿ ಕೆಲಸ ಮಾಡಬೇಕು.

ಗದಗ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಉಕ್ಕಿನ ಮನುಷ್ಯರೆಂದೇ ಪ್ರಸಿದ್ಧರಾಗಿದ್ದಾರೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಪ್ರತಿಯೊಬ್ಬ ಭಾರತೀಯ ಪ್ರಜೆಯು ಭ್ರಾತೃತ್ವ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಬಿ.ಪಿ. ಜೈನರ ತಿಳಿಸಿದರು.

ನಗರದ ಆದರ್ಶ ಶಿಕ್ಷಣ ಸಮಿತಿಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಪ್ರಯುಕ್ತ ನಡೆದ ಚರ್ಚಾ ಸ್ಪರ್ಧೆಯಲ್ಲಿ ಮಾತನಾಡಿದರು.

ಸಂವಿಧಾನದ ಪೀಠಿಕೆಯಲ್ಲಿ ತಿಳಿಸಿರುವಂತೆ ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ ನಂಬಿಕೆ, ಶ್ರದ್ಧೆ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ದೊರೆಯುವಂತೆ ಮಾಡುವುದಕ್ಕಾಗಿ ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ಅದರೊಂದಿಗೆ ವಿಭಿನ್ನ ಧರ್ಮಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳನ್ನು ಹೊಂದಿದ್ದರೂ ಪರಸ್ಪರ ಗೌರವ ಮತ್ತು ಶಾಂತಿಯುತ ಸಹಬಾಳ್ವೆ ನಡೆಸಲು ಪ್ರೋತ್ಸಾಹಿಸಬೇಕು. ಜನರ ನಡುವಿನ ಭಿನ್ನಾಭಿಪ್ರಾಯಗಳನ್ನು ವಿವಾದದ ಮೂಲವೆಂದು ಪರಿಗಣಿಸದೆ, ಎಲ್ಲರೂ ಒಟ್ಟಾಗಿ ಸಾಮಾನ್ಯ ಗುರಿಗಳಿಗಾಗಿ ಕೆಲಸ ಮಾಡಬೇಕೆಂದು ತಿಳಿಸಿದರು. ಈ ವೇಳೆ ಮಹಾವಿದ್ಯಾಲಯದ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.