ದೇಶಕ್ಕೆ ಕೊಡುಗೆ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಿ: ದಂಡಿನ

| Published : Nov 25 2024, 01:03 AM IST

ದೇಶಕ್ಕೆ ಕೊಡುಗೆ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಿ: ದಂಡಿನ
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ಯುವ ಜನತೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆ

ರೋಣ: ವಿದ್ಯಾರ್ಥಿ ಜೀವನ ಅಮೂಲ್ಯ ಘಟ್ಟವಾಗಿದ್ದು, ಅತಿಯಾದ ಮನರಂಜನೆ ಮತ್ತು ವ್ಯಸನಗಳಿಗೆ ಬಲಿಯಾಗದೇ ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉನ್ನತ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಮತ್ತು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವಂತಹ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕನಕದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿ ರವಿ ದಂಡಿನ ಹೇಳಿದರು.

ಅವರು ಪಟ್ಟಣದ ಕೆಎಸ್ಎಸ್ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವ ಜನತೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದ್ದು, ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವ ಅಭಿವೃದ್ಧಿಗೊಳಿಸಿಕೊಳ್ಳುವುದರ ಜತೆಗೆ ಉನ್ನತ ವ್ಯಕ್ತಿತ್ವ ಬೆಳೆಸಿಕೊಂಡು ದೇಶ ಎದುರಿಸುತ್ತಿರುವ ಹಲವು ಸವಾಲುಗಳನ್ನು ಸಾಂಘಿಕವಾಗಿ ಮೆಟ್ಟಿ ನಿಂತು ದೇಶ ಕಟ್ಟುವ ಕಾರ್ಯದಲ್ಲಿ ತೊಡಗುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಐ.ಸಿ. ಎಸ್ ಕಾಲೇಜು ಉಪನ್ಯಾಸಕ ಎಸ್.ಆರ್. ಚಿಕ್ಕನಗೌಡ್ರ, ಕೆಎಸ್ಎಸ್ ಕಾಲೇಜಿನ ಪ್ರಾಚಾರ್ಯ ಸಿ.ಬಿ. ಪೊಲೀಸ್‌ಪಾಟೀಲ, ಶ್ರೀಶರಣಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಎಚ್. ನಾಯ್ಕರ, ಉಪನ್ಯಾಸಕ ಎಂ.ಎಸ್. ದಳವಾಯಿ, ಎಸ್.ಆರ್. ನದಾಫ,ಎಸ್.ವಿ. ಸಂಕನಗೌಡ್ರ, ಎಂ.ವೈ. ಕಿತ್ತಲಿ, ಬಸವರಾಜ ಜಂಗಣ್ಣವರ, ಎಂ.ಎಚ್. ನಾಯ್ಕರ ಸೇರಿದಂತೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.