ಸಾರಾಂಶ
- ಈಶ್ವರಮ್ಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ದಾವಣಗೆರೆಮಕ್ಕಳು ಶಿಕ್ಷಣದ ಜತೆಗೆ ನಾಯಕತ್ವ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಮಹಾನಗರ ಪಾಲಿಕೆ ಮಾಜಿ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ ಹೇಳಿದರು.
ನಗರದ ಪಿ.ಜೆ. ಬಡಾವಣೆಯಲ್ಲಿರುವ ಈಶ್ವರಮ್ಮ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024- 2025ನೇ ಸಾಲಿನ ಶೈಕ್ಷಣಿಕ ಶಾಲಾ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ ಮತ್ತು ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾಭ್ಯಾಸದ ಜೊತೆಗೆ ಸಂಸ್ಕೃತಿ, ಶಿಸ್ತು ಬೆಳೆಸುವಂತಹ ನಮ್ಮ ಈಶ್ವರಮ್ಮ ಶಾಲೆ ಎಲ್ಲ ಶಾಲೆಗಳಿಗೂ ಮಾದರಿ. ಆಡಳಿತ ಪಕ್ಷದ ತಪ್ಪುಗಳನ್ನು ವಿರೋಧ ಪಕ್ಷ ತಿದ್ದುವ ಕಾರ್ಯದ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಬಹಳ ಮುಖ್ಯ. ಗುರುಗಳ ಮಾರ್ಗದರ್ಶನದಂತೆ ನಡೆದುಕೊಂಡು ಶಾಲೆಗೆ, ಪೋಷಕರಿಗೆ ಹಾಗೂ ದೇಶಕ್ಕೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾಡಳಿತ ಮಂಡಳಿ ಅಧ್ಯಕ್ಷೆ ಕೆ.ಆರ್. ಸುಜಾತ ಕೃಷ್ಣ, ಮಂತ್ರಿ ಮಂಡಲದ ವಿದ್ಯಾರ್ಥಿಗಳು ಪ್ರಮಾಣ ವಚನದ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು. ಮಂತ್ರಿ ಮಂಡಲ ಉದ್ದೇಶವನ್ನು ಸಾರ್ಥಕ ಮಾಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಿರಿ ಎಂದು ಹಾರೈಸಿದರು.ಆಡಳಿತ ಪಕ್ಷ ಏನೇ ಮಾಡಿದರೂ ಅದನ್ನು ಜನಪರ ದೃಷ್ಟಿಯಲ್ಲಿ ಅವಲೋಕಿಸಿ, ವಿರೋಧಿಸುವುದು ವಿಪಕ್ಷದ ಕೆಲಸವಾಗಿರುತ್ತದೆ. ಆದರೆ, ಶಾಲಾ ಮಂತ್ರಿ ಮಂಡಲದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದವರು ಒಂದಾಗಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಹಶಿಕ್ಷಕಿ ಬಿ.ಶ್ರೀದೇವಿ ವಿದ್ಯಾರ್ಥಿ ಸಂಘಗಳನ್ನು ಪರಿಚಯಿಸಿದರು. ಈಶ್ವರಮ್ಮ ಟ್ರಸ್ಟ್ ಕಾರ್ಯದರ್ಶಿ ಜಿ.ಆರ್. ವಿಜಯಾನಂದ್, ಜಿ.ಎಸ್. ಶಶಿರೇಖಾ, ಎನ್.ಎಸ್. ಸವಿತ, ಎಂ.ರೋಹಿಣಿ ಉಪಸ್ಥಿತದ್ದರು.- - - - -
ಬಾಕ್ಸ್ * ಶೈಕ್ಷಣಿಕ ಮಂತ್ರಿ ಮಂಡಲಕ್ಕೆ ಆಯ್ಕೆಅಣಕು ಚುನಾವಣೆಯಲ್ಲಿ ಬಿ.ಎನ್. ಭಾವನಾ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕಿಯಾಗಿ ಎ.ಪಿ. ಯಶಸ್ವಿನಿ ಆಯ್ಕೆಯಾಗಿದ್ದರು. ಸಹಶಿಕ್ಷಕಿ ಹೇಮಲತಾ ಚುನಾವಣಾ ಪ್ರಕ್ರಿಯೆ ವಿವರಿಸಿದರು. 25 ಸಚಿವರನ್ನು ಒಳಗೊಂಡ ಶಾಲಾ ಮಂತ್ರಿ ಮಂಡಲದಲ್ಲಿ ರಾಜ್ಯಪಾಲರಾಗಿ ಪ್ರಾಚಾರ್ಯ ಕೆ.ಎಸ್. ಪ್ರಭುಕುಮಾರ್, ಸಭಾಪತಿಯಾಗಿ ಉಪ ಪ್ರಾಚಾರ್ಯೆ ಜಿ.ಎಸ್.ಶಶಿರೇಖಾ, ಸಂಪುಟ ಕಾರ್ಯದರ್ಶಿಯಾಗಿ ಸಹಶಿಕ್ಷಕಿ ರೋಹಿಣಿ ಎಂ. ಭಾವಿ ನಾಯಕರಾಗುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾದರು.
- - - -8ಕೆಡಿವಿಜಿ41:ದಾವಣಗೆರೆಯ ಈಶ್ವರಮ್ಮ ಶಾಲೆಯಲ್ಲಿ ನಡೆದ ಮಂತ್ರಿಮಂಡಲ ಪ್ರತಿಜ್ಞಾ ಸ್ವೀಕಾರ ಮತ್ತು ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮವನ್ನು ಗಡಿಗುಡಾಳ ಮಂಜುನಾಥ ಉದ್ಘಾಟಿಸಿದರು.