ಸಾರಾಂಶ
Develop sportsmanship: Dr. Sudat
-ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಕ್ರೀಡಾಕೂಟಕ್ಕೆ ಡಾ. ಸುದತ್ ದರ್ಶನಾಪುರ ಚಾಲನೆ
----ಕನ್ನಡಪ್ರಭ ವಾರ್ತೆ ಶಹಾಪುರ
ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲೂ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವದ ವಿಕಸನ ಸಾಧ್ಯವಾಗುತ್ತದೆ. ಆಟಕ್ಕೆ ಎಷ್ಟು ಮಹತ್ವ ಕೊಡಲಾಗುತ್ತದೆಯೋ ಅಷ್ಟೇ ಮಹತ್ವ ಕ್ರೀಡೆಗೆ ಕೊಟ್ಟಾಗ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನವಾಗುತ್ತದೆ. ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಮಕ್ಕಳ ವೈದ್ಯ ಡಾ. ಸುದತ್ ದರ್ಶನಾಪುರ ಹೇಳಿದರು.ನಗರದ ಸಾಯಿ ವಿದ್ಯಾನಿಕೇತನ ಸಿ.ಬಿ.ಎಸ್ಸಿ. ಶಾಲೆಯಲ್ಲಿ ನಡೆದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿ, ಮಕ್ಕಳು ವಾಸ್ತವವಾಗಿ ಆಟದಿಂದ ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗುತ್ತಾರೆ. ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ ಎಂದರು.
ಗುರುಕುಲ ಅಕಾಡೆಮಿಯ ಡಾ. ಶಿವರಾಜ್ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು, ವಿದ್ಯಾರ್ಜನೆಯ ಸಂದರ್ಭದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಜೊತೆ ಅಧ್ಯಾಪಕರು, ಶಾಲಾ ಅಭಿವೃದ್ಧಿ ಸಮಿತಿಗಳು ಹಾಗೂ ಪೋಷಕರು ಕೈಜೋಡಿಸುವ ಅಗತ್ಯವಿದೆ ಎಂದರು.ಶಾಲಾ ಶಿಕ್ಷಣ ಇಲಾಖೆಯ ವಲಯ ಸಂಪನ್ಮೂಲ ವ್ಯಕ್ತಿ ವೀರಭದ್ರ ಹಿರೇಮಠ ಮಾತನಾಡಿದರು. ಸಾಯಿ ವಿದ್ಯಾನಿಕೇತನ ಶಾಲೆಯ ಪ್ರೌಢಶಾಲಾ ಅನಿಲ್ ಕುಮಾರ್ ಮಲಶೆಟ್ಟಿ, ಕ್ರೀಡಾಧಿಕಾರಿ ಶೀಮ ಸೈಯದ್ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ದೈಹಿಕ ಶಿಕ್ಷಕರು, ಮಕ್ಕಳು ಮತ್ತು ಆಡಳಿತ ಮಂಡಳಿಯವರು ಇದ್ದರು.
------14ವೈಡಿಆರ್9: ಶಹಾಪುರ ಹೊರವಲಯದ ಸಾಯಿ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಕ್ರೀಡಾಕೂಟಕ್ಕೆ ಖ್ಯಾತ ಮಕ್ಕಳ ತಜ್ಞ ಡಾ. ಸುದತ್ ದರ್ಶನಾಪುರ ಅವರು ಚಾಲನೆ ನೀಡಿದರು.