ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಪರ್ವ: ಲಾವಣ್ಯ ಬಲ್ಲಾಳ್

| Published : May 20 2025, 11:53 PM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಪರ್ವ: ಲಾವಣ್ಯ ಬಲ್ಲಾಳ್
Share this Article
  • FB
  • TW
  • Linkdin
  • Email

ಸಾರಾಂಶ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಯದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ ಎಂದು ಬಿಜೆಪಿಯವರು ಲೇವಡಿ ಮಾಡಿದ್ದರು. ಆದರೆ ಸರ್ಕಾರ ಬೊಕ್ಕಸ ಖಾಲಿಯಾಗಿಲ್ಲ. ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಬಿಜೆಪಿ ಆಡಳಿತ ನಡೆಸುವ ರಾಜ್ಯಗಳಲ್ಲೂ ಗ್ಯಾರೆಂಟಿ ಯೋಜನೆಯನ್ನು ಅನುಕರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ೨ ವರ್ಷದಲ್ಲಿ ಆರ್ಥಿಕತೆಯನ್ನು 7ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿಯೂ ಇದೇ ರೀತಿ ಅಭಿವೃದ್ಧಿ ಪರ್ವ ಮುಂದುವರಿಯಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಚ ಗ್ಯಾರೆಂಟಿ ಮೂಲಕ ಸಮಾಜದ ಎಲ್ಲ ವರ್ಗದವರಿಗೂ ಆರ್ಥಿಕ ಉತ್ತೇಜನ ನೀಡುವ ಕೆಲಸ ಸರ್ಕಾರದಿಂದ ಆಗಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಯುವಕರಿಗೆ ಉದ್ಯೋಗ ಸೃಷ್ಠಿಯಲ್ಲೂ ಮುಂದಿದೆ ಎಂದರು.ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಯದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ ಎಂದು ಬಿಜೆಪಿಯವರು ಲೇವಡಿ ಮಾಡಿದ್ದರು. ಆದರೆ ಸರ್ಕಾರ ಬೊಕ್ಕಸ ಖಾಲಿಯಾಗಿಲ್ಲ. ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಬಿಜೆಪಿ ಆಡಳಿತ ನಡೆಸುವ ರಾಜ್ಯಗಳಲ್ಲೂ ಗ್ಯಾರೆಂಟಿ ಯೋಜನೆಯನ್ನು ಅನುಕರಿಸಲಾಗಿದೆ ಎಂದು ಹೇಳಿದರು.ಬಳ್ಳಾರಿಯ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ಸಾಧನ ಸಮಾವೇಶಕ್ಕೆ ಉಡುಪಿ ಜಿಲ್ಲೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಕಳೆದ ೨ ವರ್ಷದಲ್ಲಿ ಪಂಚ ಗ್ಯಾರೆಂಟಿ ಮೂಲಕ 1,670ಕ್ಕೂ ಅಧಿಕ ಕೋ‌ಟಿ ರುಪಾಯಿಗಳು ಸೌಲಭ್ಯವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಶಕ್ತಿ ಯೋಜನೆ ಅಡಿ 2.5 ಕೋಟಿ ಜನ ಪ್ರಯಾಣಿಸಿದ್ದು, ₹ 9.3 ಕೋಟಿಗೂ ಅಧಿಕ ಹಣ ವ್ಯಯಿಸಲಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬಿಪಿನ್ ಚಂದ್ರಪಾಲ್ ನಕ್ರೆ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ಮಹಾಬಲ ಕುಂದರ್ ಉಪಸ್ಥಿತರಿದ್ದರು.