ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ-ಸಚಿವ ಜಮೀರ್

| Published : Nov 05 2025, 12:30 AM IST

ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ-ಸಚಿವ ಜಮೀರ್
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ಒಂದು ವರ್ಷದಿಂದ ಹಿಂದೆಂದೂ ಕಾಣದ ಅಭಿವೃದ್ಧಿ ಕಾಮಗಾರಿ ನಡೆದಿವೆ. ಹೀಗಾಗಿ ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದಖಾನ್ ಹೇಳಿದರು.

ಶಿಗ್ಗಾಂವಿ: ಕಳೆದ ಒಂದು ವರ್ಷದಿಂದ ಹಿಂದೆಂದೂ ಕಾಣದ ಅಭಿವೃದ್ಧಿ ಕಾಮಗಾರಿ ನಡೆದಿವೆ. ಹೀಗಾಗಿ ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದಖಾನ್ ಹೇಳಿದರು.ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಶಾಸಕ ಪಠಾಣ ಅವರು ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ವಹಿಸಿದ್ದಾರೆ. ಶಿಗ್ಗಾಂವಿ, ಸವಣೂರ ಹಾಗೂ ಬಂಕಾಪುರ ಪಟ್ಟಣಗಳಿಗೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗಾಗಿ ಸುಮಾರು ₹ ೩೫೦ ಕೋಟಿ ಅನುದಾನ ತಂದಿದ್ದಾರೆ ಎಂದರು.ಬಿದ್ದ ಮನೆಗಳಿಗೆ ಹಿಂದೆ ಬಿಡುಗಡೆಯಾದ ಹಣದಲ್ಲಿ ಜಿಎಸ್‌ಟಿ ಹಾಕುವುದು ಬೇಡ ಎಂದರು ಕೇಳಲಿಲ್ಲ. ಆದರೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಮನೆಗಳಿಗೆ ಜಿಎಸ್‌ಟಿ ಹಾಕಿಲ್ಲ. ಅದರಿಂದಾಗಿ ಸ್ಥಗಿತಗೊಂಡಿರುವ ಮನೆಗಳನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ದಿವಾಳಿ ಆಗಲಿದೆ ಎಂದು ವಿರೋಧಿಸಿದವರು ಇಂದು ಒಪ್ಪುವಂತಾಗಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಅದರಿಂದಾಗಿ ಜನ ಕಾಂಗ್ರೆಸ್ ಸರ್ಕಾರವನ್ನು ಮರೆಯದಂತಾಗಿದೆ ಎಂದರು.ಅಲ್ಪಸಂಖ್ಯಾತರ ಇಲಾಖೆಯಡಿ ಅಭಿವೃದ್ಧಿ ಯೋಜನೆಗಳಿಗೆ ಸುಮಾರು ₹ ೪.೫ ಸಾವಿರ ಕೋಟಿ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಅವರು ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ಮತದಾರರು ಒಂದು ಕ್ಷೇತ್ರದಲ್ಲಿನ ಬದಲಾವಣೆ ಬಯಸಿ ಆಯ್ಕೆ ಮಾಡುತ್ತಾರೆ. ನಂತರ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮರು ಆಯ್ಕೆ ಮಾಡುತ್ತಾರೆ. ಹೀಗಾಗಿ ಜನಪ್ರತಿನಿದಿಗಳು ಜನರ ನಡುವೆ ಇರಬೇಕು. ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸಬೇಕು. ಒಳ್ಳೆಯ ಜನ ಮೆಚ್ಚುವ ಕಾರ್ಯಗಳನ್ನು ಮಾಡುವ ಮೂಲಕ ಜನರಮನದಲ್ಲಿ ನೆಲೆಸಿರಿ ಎಂದ ಅವರು ಕಳೆದ ೫ ಬಾರಿಯಿಂದ ಸತತವಾಗಿ ನಮ್ಮ ಕ್ಷೇತ್ರದ ಜನ ಆಯ್ಕೆ ಮಾಡಿದ್ದಾರೆ. ಅದಕ್ಕೆ ಜನಪರ ಅಭಿವೃದ್ಧಿ ಕಾರ್ಯಗಳು ಕಾರಣವಾಗಿವೆ. ತಾವು ಸಹ ಉತ್ತಮ ಕಾರ್ಯಗಳನ್ನು ಮಾಡಬೇಕು ಎಂದರು.ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚುನಾವಣೆ ಪೂರ್ವದಲ್ಲಿ ಸಚಿವ ಜಮೀರಅಹ್ಮದಖಾನ್ ಅವರು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಹಕರಿಸಿದ್ದಾರೆ. ತಮ್ಮ ಇಲಾಖೆ ಮೂಲಕ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ ಎಂದರು.

ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಸವಣೂರ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಪುರಸಭೆ ಸದಸ್ಯರಾದ ಗೌಸಖಾನ್ ಮುನಸಿ, ವಸಂತಾ ಬಾಗೂರ ಮುಖಂಡರಾದ ಅಲ್ತಾಪ್ ಹಳ್ಳೂರ, ಎಂ.ಎಂ. ಪಠಾಣ, ಅಣ್ಣಪ್ಪ ಲಮಾಣಿ, ವೀರೇಶ ಆಜೂರ, ಶಂಭು ನೇತ್ರಾಜ, ಶಂಭಣ್ಣ ಆಜೂರ, ಹನುಮರೆಡ್ಡಿ ನಡುವಿನಮನಿ, ಕರಿಂಸಾಬ ಮೊಗಲಲ್ಲಿ, ಚಂದ್ರು ಕೊಡ್ಲಿವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.