ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ

| Published : Oct 10 2024, 02:26 AM IST

ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವುದೇ ದತ್ತು ಗ್ರಾಮದ ಉದ್ದೇಶವಾಗಿದೆ.

ಮೊರನಾಳ ಗ್ರಾಮದಲ್ಲಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ

ಕನ್ನಡಪ್ರಭ ವಾರ್ತೆ ಕೊಪ್ಪಳ

ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವುದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಕೊಪ್ಪಳ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ ಹೇಳಿದರು.

ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಬುಧವಾರ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮ ಅಭಿವೃದ್ಧಿಗಾಗಿ ಆಯ್ಕೆ ಮಾಡಿರುವ ಕುರಿತು ಗ್ರಾಮಸ್ಥರೊಂದಿಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಇತ್ತೀಚೆಗೆ ಸಂಸದರ ಅಧ್ಯಕ್ಷತೆಯಲ್ಲಿ ಜರುಗಿದ ದಿಶಾ ಸಭೆಯಲ್ಲಿ ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯತಿಯ ಕಾಮನೂರು ಗ್ರಾಮ ಹಾಗೂ ಬೆಟಗೇರಿ ಗ್ರಾಮ ಪಂಚಾಯಿತಿಯ ಮೋರನಾಳ ಗ್ರಾಮಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಗ್ರಾಮ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಿಸಲು ಅವಕಾಶವಿದೆ ಎಂದರು.

ಎಲ್ಲ ತಾಂತ್ರಿಕ ಸಹಾಯಕರು ಪ್ರತಿ ಕಾಲನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ಧಿ ಕಾಮಗಾರಿಗಳು ಅನುಷ್ಠಾನಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಪ್ರಕಾಶ ತಿಳಿಸಿದರು. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿ ಕುರಿತು ಸಭೆಯಲ್ಲಿ ವಿವರಿಸಿದರು.ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಿಸಲಾಗುವುದು ಎಂದು ಸಭೆಯಲ್ಲಿ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.

ಗ್ರಾಮದಲ್ಲಿರುವ ಸಣ್ಣ, ಅತೀ ಸಣ್ಣ ರೈತರಿಗೆ ನರೇಗಾದಡಿ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ರೈತರು ಅರಿತುಕೊಂಡು ತಮ್ಮ ಆದ್ಯತಾ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಲು ತಿಳಿಸಿದರು.

ಈ ಸಂದರ್ಭ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ದುರಗಪ್ಪ ಭಜೆಂತ್ರಿ, ಸದಸ್ಯರಾದ ಅಂದಪ್ಪ ಚೀಲಗೋದ್ರ ಹಾಗೂ ಭರಮಪ್ಪ ಹುಳ್ಳಿ, ಪಿಡಿಒ ದಾನಪ್ಪ ಸಂಗಟಿ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮದ ಮುಖಂಡರಾದ ಚಂದ್ರಪ್ಪ ಹುಳ್ಳಿ, ಯಲ್ಲಪ್ಪ ಮಾಗಳಾದ, ದೇವಪ್ಪ ಮಾಗಳಾದ, ಸಣ್ಣ ಈರಪ್ಪ ಅಣಬಿ, ಮಂಜಪ್ಪ ಸಂಗಟಿ ಸೇರಿದಂತೆ ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.