ಅನುಭವಿ ರಾಜಕಾರಣಿಯಿಂದ ಅಭಿವೃದ್ಧಿ ಸಾಧ್ಯ

| Published : Apr 30 2024, 02:00 AM IST

ಸಾರಾಂಶ

ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ದೊರೆತಿರುವುದು ನಮ್ಮೆಲ್ಲರ ಪುಣ್ಯ

ಮುಂಡರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಳ ಹೊರಗನ್ನು ಬಲ್ಲವರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯಂತಹ ಅನುಭವಿ ರಾಜಕಾರಣಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.

ಅವರು ಸೋಮವಾರ ಮುಂಡರಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಾದ ಎಸ್.ಎಸ್. ಗಡ್ಡದ ಹಾಗೂ ಕೊಟ್ರೇಶ ಅಂಗಡಿ ಅವರ ನಿವಾಸಕ್ಕೆ ತೆರಳಿದ ನಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ದೊರೆತಿರುವುದು ನಮ್ಮೆಲ್ಲರ ಪುಣ್ಯ ಇಂತವರನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವಕ್ಕೆ ಗೌರವ ಬರುವುದಿಲ್ಲ. ನಮ್ಮ ಭವಿಷ್ಯಕ್ಕಾಗಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವುದು ಇದೀಗ ನಮ್ಮ ಕೈಯಲ್ಲಿದೆ. ಎಂತಹವರನ್ನು ಆರಿಸಿ ಕಳಿಸಿದರೆ ಕೇಂದ್ರ ಸರ್ಕಾರ ದೊಡ್ಡಮಟ್ಟದ ಅನುದಾನ ತರಲು ಸಾಧ್ಯವಾಗುತ್ತದೆ ಎನ್ನುವುದನ್ನು ಅರಿತು ಮತ ನೀಡಬೇಕು ಎಂದರು.

ನರೇಂದ್ರ ಮೋದಿ ಅವರನ್ನು ಇಡೀ ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಅವರು ಸಹ ಜನರ ಮನಸ್ಸನ್ನು ಗೆದ್ದಿದ್ದಾರೆ. ಅದಕ್ಕೆ ಅವರು ಮಾಡಿದ ಅಭಿವೃದ್ಧಿ ಕೆಲಸಗಳೇ ಸಾಕ್ಷಿ. ಭದ್ರತೆ ದೃಷ್ಠಿಯಿಂದಲು ಸಹ ಮೋದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅನೇಕ ದೇಶಗಳು ದಿವಾಳಿಯಾಗಿವೆ. ಆದರೆ ಭಾರತ ಮಾತ್ರ ಅಭಿವೃದ್ಧಿ ಪಥದತ್ತ ಸಾಗಿದೆ. 140 ಕೋಟಿ ಜನಸಂಖ್ಯೆ ಇದ್ದರೂ ಸಹ ನಮ್ಮ ದೇಶದಲ್ಲಿ ಯಾವುದಕ್ಕೂ ಏನೂ ಕಡಿಮೆ ಇಲ್ಲ. ರಾಜ್ಯ ಸರ್ಕಾರದಿಂದ ಇದುವರೆಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಮತ ಹಾಕುವ ಪ್ರಜ್ಞಾವಂತ ಮತದಾರರು ಈ ಬಗ್ಗೆ ಯೋಚಿಸಬೇಕು.10 ವರ್ಷದ ಅವಧಿಯಲ್ಲಿ ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿ ಹೊಂದಿದ್ದೇವೆ. ಯೋಗ್ಯರಿಂದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳ ಪರ ನಾವೇ ಅಭ್ಯರ್ಥಿಗಳಾಗಿ ಕೆಲಸ ಮಾಡಬೇಕು. ಪ್ರಜ್ಞಾವಂತರ ಈ ನಾಡಿನಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತ ನೀಡಿ ಆರಿಸಿ ಕಳಿಸಬೇಕು ಎಂದರು.

ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕರಬಸಪ್ಪ ಹಂಚಿನಾಳ, ಲಿಂಗರಾಜಗೌಡ ಪಾಟೀಲ, ಕೊಟ್ರೇಶ ಅಂಗಡಿ, ಎಸ್.ಎಸ್. ಗಡ್ಡದ, ಮುದಕಪ್ಪ ಬೆಟಗೇರಿ, ಎಸ್.ವಿ. ಪಾಟೀಲ, ಮೈಲಾರಪ್ಪ ಕಲಕೇರಿ, ಗೌತಮಚಂದ್ ಚೋಪ್ರಾ, ರಾಘವೇಂದ್ರ ಹೆಗಡಾಳ, ವೀರಣ್ಣ ಮೇಟಿ, ಪ್ರಶಾಂತ ತಾವರಗೇರಿ, ಅಂದಪ್ಪ ಗೋಡಿ, ಆನಂದಗೌಡ ಪಾಟೀಲ, ರಜನೀಕಾಂತ ದೇಸಾಯಿ, ಜ್ಯೋತಿ ಹಾನಗಲ್, ಎಚ್. ವಿರುಪಾಕ್ಷಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.