ಪಂಚಾಯ್ತಿಗೊಂದು ಸರ್ಕಾರಿ ಮಾದರಿ ಶಾಲೆ ಅಭಿವೃದ್ಧಿ: ದರ್ಶನ್ ಪುಟ್ಟಣ್ಣಯ್ಯ

| Published : Aug 29 2025, 01:00 AM IST

ಸಾರಾಂಶ

ತಾಲೂಕಿನ ಈರೇಗೌಡನ ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನಲ್ಲಿ ಪಂಚಾಯಿತಿಗೊಂದು ಸರ್ಕಾರಿ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವುದಾಗಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲೂಕಿನ ಈರೇಗೌಡನ ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಈ ಶಾಲೆಯಲ್ಲಿ ಪಿಎಬಿ ಅನುಮೋದಿತ ಪೂರ್ವ ಪ್ರಾಥಮಿಕ ವಿಭಾಗವಿರುವುದರಿಂದ ಹೆಚ್ಚುವರಿ ಕೊಠಡಿ ನೀಡಲಾಗಿದೆ. ಮಕ್ಕಳ ಸಂಖ್ಯೆ ಅಧಿಕವಾಗಿರುವ ಕಾರಣ ಇನ್ನೂ ಎರಡು ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದ ಶಾಸಕರು, ಪೂರ್ವ ಪ್ರಾಥಮಿಕ ವಿಭಾಗದ ಎಲ್ಲಾ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗೊಳಿಸಲು ಸರ್ಕಾರದ ಗಮನ ಸೆಳೆಯುವುದಾಗಿಯೂ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷೆ ಎನ್.ಎ.ಯಶೋಧ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಸುಂಕಾತೊಣ್ಣೂರು ಗ್ರಾಪಂ ಅಧ್ಯಕ್ಷೆ ರಾಧಾ ಮಹೇಶ್ ಆನುವಾಳು, ಉಪಾಧ್ಯಕ್ಷ ಹೇಮಂತ್ ಕುಮಾರ್, ಸದಸ್ಯೆ ಸರೋಜಮ್ಮ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಂದೀಶ್, ರೈತ ಸಂಘದ ಮುಖಂಡರಾದ ನಟರಾಜು, ನಲ್ಲಹಳ್ಳಿ ಕುಳ್ಳೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಯಜಮಾನರು, ಮುಖಂಡರು, ಶಿಕ್ಷಣ ಸಂಯೋಜಕ ಶ್ರೀನಿವಾಸ್, ಪಿಡಿಒ ಮಹಾದೇವ, ಹಿರಿಯ ಶಿಕ್ಷಕ ಎಲ್.ಕೆ.ಅನಂತಮೂರ್ತಿ, ಮುಖ್ಯ ಶಿಕ್ಷಕ ಡಿ.ಎಸ್.ವೆಂಕಟೇಶ್, ಸಹಶಿಕ್ಷಕ ವಿ.ಎಸ್.ವಿನೋದ್ ಕುಮಾರ್ ಇತರರಿದ್ದರು.