ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕುಗಳ ಅಭಿವೃದ್ಧಿ: ಪ್ರೊ.ಎಂ.ಗೋವಿಂದರಾವ್

| Published : Mar 26 2025, 01:33 AM IST

ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕುಗಳ ಅಭಿವೃದ್ಧಿ: ಪ್ರೊ.ಎಂ.ಗೋವಿಂದರಾವ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಪ್ರದೇಶದಲ್ಲಿರುವ ಸಮಸ್ಯೆಗಳು ಹಾಗೂ ಯಾವ ರೀತಿ ನಿವಾರಣೆ ಮಾಡಬೇಕೆಂದು ಕುಲಂಕುಶವಾಗಿ ಪರಿಶೀಲನೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಅಭಿವೃದ್ದಿಗೆ ಶೀಫಾರಸ್ಸು ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕುಗಳನ್ನು ಅಭಿವೃದ್ಧಿ ಪಡಿಸಲು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯೂ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ಸಮಗ್ರ ವರದಿಯನ್ನು ಸೆಪ್ಟೆಂಬರ್ ತಿಂಗಳೊಳಗೆ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ತಿಳಿಸಿದರು.

ತಾಲೂಕಿನ ತಮ್ಮಡಹಳ್ಳಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿ, ಸರ್ಕಾರದಿಂದ ರಚನೆಯಾಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯೂ ರಾಜ್ಯದ ಹಿಂದುಳಿದಿರುವ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದರು.

ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಪ್ರದೇಶದಲ್ಲಿರುವ ಸಮಸ್ಯೆಗಳು ಹಾಗೂ ಯಾವ ರೀತಿ ನಿವಾರಣೆ ಮಾಡಬೇಕೆಂದು ಕುಲಂಕುಶವಾಗಿ ಪರಿಶೀಲನೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಅಭಿವೃದ್ದಿಗೆ ಶೀಫಾರಸ್ಸು ಮಾಡಲಾಗುವುದು ಎಂದರು.

ಈಗಾಗಲೇ ಹಲವು ಗ್ರಾಮಗಳಿಗೆ ಭೇಟಿ ನೀಡಿ ಆ ಗ್ರಾಮಗಳ ಪರಿಸ್ಥಿತಿ ಅವಲೋಕಿಸಲಾಗಿದೆ, ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಕೂಡ ತಾಲೂಕಿಗೆ ಆಗಬೇಕಿರುವ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ್ದಾರೆ. ಅಭಿವೃದ್ಧಿ ಬಗ್ಗೆ ಸಮಿತಿ ಗಮನಕ್ಕೆ ತರಬಹುದಾಗಿದೆ ಎಂದರು.

ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲ ಸೌಲಭ್ಯಗಳು ಪ್ರತಿಯೊಂದು ಗ್ರಾಮಕ್ಕೂ ಸಿಗಬೇಕು, ತಾಲೂಕಿನಲ್ಲಿ ಯಾವ ರೀತಿ ಅಭಿವೃದ್ಧಿ ಹೊಂದಿದೆ. ಯಾವ ಸೌಲಭ್ಯ ನೀಡಬೇಕು ಎಂಬುವುದರ ಬಗ್ಗೆ ಅಂಕಿ ಅಂಶಗಳ ಮೂಲಕ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದರು.

ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಸಕ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ನಂಜುಂಡಪ್ಪ ವರದಿ ಪ್ರಕಾರ ತಾಲೂಕು ಹಿಂದುಳಿದ ಪ್ರದೇಶವಾಗಿದ್ದು, ಸರ್ಕಾರದಿಂದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚನೆ ಮಾಡಿ ಸಮಗ್ರ ವರದಿಯನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ ಎಂದರು.

ತಾಲೂಕಿಗೆ ಶಿಕ್ಷಣ, ಉದ್ಯೋಗ, ವಸತಿ, ಸೇರಿದಂತೆ ಮೂಲ ಸಮಸ್ಯೆಗಳ ಬಗೆ ಮಾಹಿತಿ ನೀಡಲಾಗಿದೆ. ಕ್ಷೇತ್ರಕ್ಕೆ ಬೇಕಾದ ಸೌಲಭ್ಯಗಳ ಬಗ್ಗೆ ಪತ್ರದ ಮೂಲಕವೂ ಸಲ್ಲಿಸಲಾಗುವುದು ಎಂದರು.

ಗ್ರಾಮಸ್ಥರು ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳನ್ನು ಅಭಿನಂದಿಸಿ ಗ್ರಾಮದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಸಮಿತಿ ಸದಸ್ಯರಾದ ಸೂರ್ಯನಾರಾಯಣ್, ಸಿದ್ದಪ್ಪ, ಸಮಿತಿಯ ಸದಸ್ಯರಾದ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಓ ನಂದೀನಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಡಾ.ಎಸ್.ವಿ ಲೊಕೇಶ್, ಬಿಇಒ ವಿ.ಈ ಉಮಾ, ತಾಲೂಕು ವೈದ್ಯಾಧಿಕಾರ ಡಾ. ವೀರಭದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ಧೇಶಕ ಸಂತೋಷ್‌ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.