ಸಾರಾಂಶ
ಪರಿಶಿಷ್ಟ ಸಮುದಾಯದದ ಸ್ಮಶಾನಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ಅಧಿಕಾರಿಗಳ ಮೂಲಕ ಸಮೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಸೂಚಿಸಿದ್ದೇನೆ. ತಾಲೂಕಿನಲ್ಲಿ ಶಿಥಿಲಗೊಂಡ ಅಂಬೇಡ್ಕರ್ ಭವನಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಪುನಶ್ಚೇತನಗೊಳಿಸಲು ಸೂಚಿಸಿದ್ದೇನೆ.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಮದ್ದೂರು ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಸಮುದಾಯದ ಸ್ಮಶಾನಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನಗಳ ಅಭಿವೃದ್ಧಿ ಹಾಗೂ ಜನರಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ವಿನಿಯೋಗಿಸಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸಮೀಪದ ತೊರೆಬೊಮ್ಮನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿ, ಸಮುದಾಯದ ಅಭಿವೃದ್ಧಿಗಾಗಿ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ಹೆಚ್ಚಿನ ಅನುದಾನ ತಂದಿದ್ದೇನೆ ಎಂದರು.
ಪರಿಶಿಷ್ಟ ಸಮುದಾಯದದ ಸ್ಮಶಾನಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ಅಧಿಕಾರಿಗಳ ಮೂಲಕ ಸಮೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಸೂಚಿಸಿದ್ದೇನೆ. ತಾಲೂಕಿನಲ್ಲಿ ಶಿಥಿಲಗೊಂಡ ಅಂಬೇಡ್ಕರ್ ಭವನಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಪುನಶ್ಚೇತನಗೊಳಿಸಲು ಸೂಚಿಸಿದ್ದೇನೆ ಎಂದರು.ಸಮಾಜ ಕಲ್ಯಾಣ ಇಲಾಖೆಯಿಂದ ಹೊಸ ಅಂಬೇಡ್ಕರ್ ಭವನಗಳನ್ನು ಈಗಾಗಲೇ ಮಂಜೂರು ಮಾಡಿಸಿ ಭೂಮಿ ಪೂಜೆ ನಡೆಸಿದ್ದೇನೆ. ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಭಾರತಿನಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಎಸ್ಸಿ ಬ್ಲಾಕ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಯುವಘಟಕದ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಗ್ರಾಪಂ ಅಧ್ಯಕ್ಷ ಜಗದೀಶ್, ಕೆಡಿಪಿ ಸದಸ್ಯ ಅಭಿಷೇಕ್ ಗೌಡ, ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ, ಮಾಜಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಯುವ ಮುಖಂಡರಾದ ಸಂತೋಷ , ಶ್ರೀ ಕಂಠಗೌಡ, ರಾಜೇಂದ್ರ ನಾಡಗೌಡ, ಚಿಕ್ಕಯ್ಯ, ತಿಮ್ಮಯ್ಯ, ಬೋರಯ್ಯ, ನಾಗರಾಜು, ಅಂಕರಾಜು, ಮುಡಿನಹಳ್ಳಿ ತಿಮ್ಮಯ್ಯ ಸೇರಿದಂತೆ ಹಲವರು ಇದ್ದರು.